ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಗ್ಯ ಸಮಸ್ಯೆಯಿರುವ ಕಾರಣ ಶಸ್ತ್ರಚಿಕಿತ್ಸೆಯ ಅಗತ್ಯವಿರುವುದರಿಂದ ಹೈಕೋರ್ಟ್ 6 ವಾರಗಳ ಕಾಲ ಮಧ್ಯಂತರ ಜಾಮೀನನ್ನು ಮಂಜೂರು ಮಾಡಿದ್ದು, ಸದ್ಯ ನಟ ದರ್ಶನ್ ಬಳ್ಳಾರಿ ಜೈಲಿನಿಂದ ಹೊರಬಂದು ಚಿಕಿತ್ಸೆಯನ್ನು ಪಡೆದುಕೊಳ್ಳುತ್ತಿರುವಸಮಯದಲ್ಲಿ ನಗರದ ಪೊಲೀಸ್ ಆಯುಕ್ತರು ನಟ ದರ್ಶನ್ ವಿರುದ್ದ ಸುಪ್ರೀಂ ಕೋರ್ಟಿಗೆ ಮೇಲ್ಮನವಿ ಸಲ್ಲಿಸಲು ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಿಕೊಂಡಿದ್ದಾರೆಂದು ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಬಿ.ದಯಾನಂದ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಆರೋಪಿ ದರ್ಶನ್‌ಗೆ ಜಾಮೀನು ಮಂಜೂರು ಮಾಡಿರುವ ವಿಚಾರವಾಗಿ ಅವರ ಜಾಮೀನು ರದ್ದು ಮಾಡುವಂತೆ ಕೋರಿ ಮೇಲ್ಮನವಿ ಸಲ್ಲಿಸಲಾಗುತ್ತದೆ.ಸುಪ್ರೀಂ ಕೋರ್ಟಿಗೆ ಮೇಲ್ಮನವಿಯನ್ನು ಸಲ್ಲಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.ಮೇಲ್ಮನವಿಯನ್ನು ಸಲ್ಲಿಸಲು ಈಗಾಗಲೇ ದಾಖಲೆಗಳನ್ನು ಸಿದ್ಧ ಮಾಡಿಕೊಂಡಾಗಿದೆ. ಕನ್ನಡದಲ್ಲಿರುವ ಮಾಹಿತಿಗಳನ್ನು ಇಂಗ್ಲೀಷಿಗೆ ಟ್ರಾನ್ಸ್‌ಲೇಟ್ ಮಾಡಿ ಸಲ್ಲಿಸಲಾಗುತ್ತದೆ ಎಂದಿದ್ದಾರೆ.