ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಮತ್ತು ಗ್ಯಾಂಗ್ನವರ ನ್ಯಾಯಾಂಗ ಬಂಧನದ ಅವಧಿಯನ್ನು ಸೆಪ್ಟೆಂಬರ್ 30ನೇ ತಾರೀಖಿನವರೆಗೂ ವಿಸ್ತರಿಸಲಾಗಿದೆ ಎಂದು ತಿಳಿದುಬಂದಿದೆ.
ನಟ ದರ್ಶನ್, ಮತ್ತು ಇನ್ನಿತರ ಆರೋಪಿಗಳ ನ್ಯಾಂಯಾಂಗ ಬಂಧನದ ಅವಧಿ ಇಂದು ಮುಕ್ತಾಯಗೊಂಡಿದೆ. ಕೊಲೆ ಪ್ರಕರಣದ ಅರ್ಜಿಯ ವಿಚಾರಣೆಯನ್ನು ನಡೆಸಿದ ಬೆಂಗಳೂರಿನ ಆರ್ಥಿಕ ಅಪರಾಧಗಳ ವಿಶೇಷ ಕೋರ್ಟ್ನ ನ್ಯಾಯಾದೀಶರು ದರ್ಶನ್, ಮತ್ತು ಇನ್ನಿತರ ಆರೋಪಿಗಳ ನ್ಯಾಂಯಾಂಗ ಬಂಧನದ ಅವಧಿಯನ್ನು ವಿಸ್ತರಿಸಲು ಆದೇಶವನ್ನು ನೀಡಿದೆ.