ಬೆಂಗಳೂರು: ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆ ಹೋಗಲು ಸಿದ್ದತೆ ನಡೆಸಿರುವ ಪೊಲೀಸರು.ಹೌದು ದರ್ಶನ್‌ಗೆ ಮಧ್ಯಂತರ ಜಾಮೀನು ನೀಡಿರುವುದನ್ನು ಪ್ರಶ್ನಿಸಿ ಪೊಲೀಸರು ಸುಪ್ರೀಂ ಕೋರ್ಟ್ ಮೊರೆ ಹೋಗಲು ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳುತ್ತಿದ್ದಾರೆ ಎಂಬ ಮಾಹಿತಿ ಬಲ್ಲ ಮೂಲಗಳಿಂದ ಲಭ್ಯವಾಗಿದೆ.
ಮಧ್ಯಂತರ ಜಾಮೀನು ಪಡೆದು ಹೊರಬಂದಿರುವ ದರ್ಶನ್‌ಗೆ ಮತ್ತೆ ಸಂಕಷ್ಟ ಎದುರಾಗಿದೆ. ಮಧ್ಯಂತರ ಜಾಮೀನು ಮಂಜೂರು ಮಾಡಿರುವಸುಪ್ರೀಂ ಕೋರ್ಟ್ ಮೊರೆ ಹೋಗಲು ಪೊಲೀದರು ಸಭೆ ನಡೆಸಿದ್ದು, ಸೋಮವಾರ ಮತ್ತೆ ಮತ್ತೊಂದು ಸಭೆಯನ್ನು ಮಾಡುವ ಸಾಧ್ಯತೆಯಿದೆ ಎನ್ನಲಾಗಿದೆ.
ಸೋಮವಾರದಂದು ಕಾನೂನು ತಜ್ಞರ ಅಭಿಪ್ರಾಯವನ್ನು ಪಡೆದು ನಂತರ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ.ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಹೈಕೋರ್ಟ್ 6 ವಾರಗಳ ಕಾಲ ಮಧ್ಯಂತರ ಜಾಮೀನನ್ನು ಮಂಜೂರು ಮಾಡಿದ್ದು ನಟ ನೆನ್ನೆ ಜೈಲಿನಿಂದ ಬಿಡುಗಡೆಯಾಗಿ ಸದ್ಯ ಮನೆಯಲ್ಲಿ ಕುಟುಂಬದವರ ಜೊತೆ ಹಬ್ಬ ಆಚರಿಸುತ್ತಿದ್ದಾರೆ.