ಬೆಂಗಳೂರು: ನಟ ಶಿವರಾಜ್‌ ಕುಮಾರ್‌ ಅವರನ್ನು ಭೇಟಿಮಾಡಿ ಅವರ ಬಳಿ ಮಡೆನೂರ್‌ ಮನು ಕ್ಷಮೆಯಾಚಿಸಿದ್ದಾರೆ ಎಂದು ತಿಳಿದುಬಂದಿದೆ.

ಇಂದು ಕಂಠೀರವ ಸ್ಟುಡಿಯೋದಲ್ಲಿ ಭೇಟಿಯಾಗಿದ್ದು, ಶಿವರಾಜ್‌ ಕುಮಾರ್‌ ಬಳಿ ಕ್ಷಮೆಯಾಚಿಸಿದ್ದಾರೆ ಎನ್ನಲಾಗಿದೆ.ಈ ಹಿಂದೆ ಶಿವರಾಜ್‌ ಕುಮಾರ್‌ ನಿವಾಸದ ಹತ್ತಿರ 4-5ಬಾರಿ ಹೋಗಿದ್ದರೂ ಭೇಟಿಯಾಗಲು ಸಾದ್ಯವಾಗಿರಲಿಲ್ಲವೆಂದು ಹೇಳಿದ್ದಾರೆ.

ಈ ಹಿಂದೆ ಚಿತ್ರನಟರ ಸಾವಿನ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆಡಿಯೋ ವೈರಲ್‌ ವಿಷಯಕ್ಕೆ ಸಂಬಂಧಿಸಿದಂತೆ ಮನು ಕ್ಷಮೆಯನ್ನು ಕೋರಿದ್ದಾರೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *