ನಟ ವಿಷ್ಣುವರ್ಧನ್‌  ಸ್ಮಾರಕವನ್ನು ನೆಲಸಮ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸೋಶಿಯಲ್‌ ಮೀಡಿಯಾಗಳಲ್ಲಿ ಹೆಚ್ಚು ಚರ್ಚೆಯಾಗುತ್ತಿದ್ದು, ಇದೀಗ ನಟಿ ರಮ್ಯಾ ತಮ್ಮ ಸಾಮಾಜಿಕ ಜಾಲಾತಾಣದಲ್ಲಿ ವಿಷ್ಣು ಸ್ಮಾರಕ ವಿಚಾರದ ಬಗ್ಗೆ ಸ್ಟೋರಿಯೊಂದನ್ನು ಹಂಚಿಕೊಂಡಿದ್ದಾರೆ.

ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಹಾಕಿರುವ ಸ್ಟೋರಿಯಲ್ಲಿ ಸಾಹಸಸಿಂಹ ವಿಷ್ಣುವರ್ಧನ್‌ ಪೋಟೋವೊಂದನ್ನು ಹಂಚಿಕೊಂಡಿದ್ದು ಅದರಲ್ಲಿ ಸಾಧಕನಿಗೆ ಸಾವಿಲ್ಲ, ಅಭಿಮಾನಿಗಳ ಹೃದಯವೇ ನಿಮಗೆ ಗುಡಿ ಎಂದು ಬರೆದುಕೊಂಡಿರುವುದು ಅಭಿಮಾನಿಗಳಲ್ಲಿ ಸಂತಸ ತಂದಿದೆ.

ನಟ ಅನಿರುದ್ಧ್‌ ವಿಷ್ಣುವರ್ಧನ್‌ ಸ್ಮಾರಕ ನಿರ್ಮಿಸುವ ಕಾರ್ಯದಲ್ಲಿ ನಾನು ನಿಮ್ಮ ಜೊತೆ ಕೈ ಜೋಡಿಸುತ್ತೇನೆ  ಎಂದು ಅಭಿಮಾನಿಗಳ ಪರವಾಗಿ ಮಾತನಾಡಿದ್ದರು. ಅಭಿಮಾನ್‌ ಸ್ಟುಡಿಯೋದಲ್ಲಿ ನಡೆದ ಘಟನೆಯ ಬಗ್ಗೆ ನನಗೂ ಬೇಸರವಿದೆ  ತುಂಬಾ ದುಃಖವಾಗ್ತಿದೆ. ಈ ಘಟನೆ ಖಂಡನೀಯ ಎಂದು ಬೇಸರ ವ್ಯಕ್ತಪಡಿಸಿದ್ದರು.

Leave a Reply

Your email address will not be published. Required fields are marked *