ಇತ್ತೀಚೆಗೆ ತಾನೇ ತಮ್ಮ ಬಹುತ್ವ ಭಾರತ ಮತ್ತು ಬೌದ್ಧ ತಾತ್ವಿಕತೆ ಎಂಬ ಪ್ರಬಂಧ ಸಂಕಲನಕ್ಕೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪಡೆದ ಖ್ಯಾತ ಲೇಖಕ ಮೂಡ್ನಾಕೂಡು ಚಿನ್ನಸ್ವಾಮಿ ಅವರಿಗೆ ಭಾರತೀಯ ವಿದ್ಯಾರ್ಥಿ ಸಂಘ, ಬೆಂಗಳೂರು ಸನ್ಮಾನ ಕಾರ್ಯಕ್ರಮವನ್ನು ಇದೇ 26ರಂದು, ಸಂಜೆ 4.30ಕ್ಕೆ, ಕೆ.ಆರ್.ಸರ್ಕಲ್ನ ಅಲ್ಯೂಮ್ನಿ ಅಸೋಸಿಯೇಷನ್ ಸಭಾಂಗಣದಲ್ಲಿ ಹಮ್ಮಿಕೊಂಡಿದೆ.
ಪ್ರಜಾವಾಣಿಯ ಕಾರ್ಯನಿರ್ವಾಹಕ ಸಂಪಾದಕ ರವೀಂದ್ರಭಟ್ಟ ಕಾರ್ಯಕ್ರಮವನ್ನು ಉದ್ಘಾಟಿಸಿದರೆ, ಕ್ರೈಸ್ಟ್ ಲಾ ಅಕಾಡೆಮಿಯ ಪ್ರಾಧ್ಯಾಪಕರಾದ ಡಾ.ಶ್ರೀನಿವಾಸ್ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ನಾಡೋಜ ಪ್ರೊ. ಬರಗೂರು ರಾಮಚಂದ್ರಪ್ಪ, ಕವಿ, ನಾಟಕಕಾರ ಡಾ.ಬೇಲೂರು ರಘುನಂದನ್, ನಿವೃತ್ತ ಐಪಿಎಸ್ ಅಧಿಕಾರಿಗಳಾದ ಮರಿಸ್ವಾಮಿ ಮತ್ತು ಡಾ. ಬಾಬೂರಾವ್ ಮುಡಬಿ ಇರಲಿದ್ದರೆ.
ಹಾಗೆಯೇ, ಅಕ್ಕ ಐಎಎಸ್ ಅಕಾಡೆಮಿಯ ಮುಖ್ಯಸ್ಥರಾದ ಡಾ.ಶಿವಕುಮಾರ್ ಅವರು ಪ್ರಾಸ್ತಾವಿಕ ಮಾತುಗಳನ್ನು ಆಡಲಿದ್ದಾರೆ.