ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ ಇನ್ನಿತರ ಆರೋಪಿಗಳನ್ನು ಸ್ಥಳಾಂತರ ಮಾಡಲು ಅರ್ಜಿಯನ್ನು ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.
ನಗರದ ಸೆಷನ್ಸ್ ನ್ಯಾಯಾಲಯಕ್ಕೆ ಪ್ರಾಸಿಕ್ಯೂಷನ್ ಪರ ಅಭಿಯೋಜಕರು ಅರ್ಜಿಯನ್ನು ಸಲ್ಲಿಸಿದ್ದಾರೆ.ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಜಾಮೀನು ರದ್ದು ಮಾಡಿರುವ ಹಿನ್ನೆಲೆಯಲ್ಲಿ ನಟ ದರ್ಶನ್ ಮತ್ತು ಇತರರು ಪರಪ್ಪನ ಅಗ್ರಹಾರ ಜೈಲಿನ ಪಾಲಾಗಿದ್ದಾರೆ.
ಈ ಹಿಂದೆ ದರ್ಶನ್ ಅರೆಸ್ಟ್ ಆಗಿದ್ದಾಗ ಜೈಲಿನಲ್ಲಿ ಅವರಿಗೆ ರಾಜಾತಿಥ್ಯ ನೀಡಿರುವ ಕಾರಣ ಆರೋಪಿಗಳನ್ನು ಬೇರೆ ಜೈಲಿಗೆ ಕಳಿಸುವಂತೆ ನ್ಯಾಯಾಲಯಕ್ಕೆ ಮನವಿಯನ್ನು ಮಾಡಲಾಗಿದೆ.ಸದ್ಯ ನಟ ದರ್ಶನ್ ಬಳ್ಳಾರಿ ಜೈಲಿಗೆ ಸ್ಥಳಾಂತರವಾಗುವ ಸಾದ್ಯತೆಗಳಿವೆ .
