ದಿನಾಂಕ: 24.08.2024 ಶನಿವಾರದಂದು ಬೆಂಗಳೂರಿನ ಪ್ಯಾಲೆಸ್ ಗ್ರೌಂಡ್‌ನಲ್ಲಿ ಜಿಂದಾಲ್ ಅವರಿಗೆ ಕಡಿಮೆ ದರದಲ್ಲಿ ಭೂಮಿ ಕೊಡುವುದಕ್ಕೆ “ಸಿದ್ದರಾಮಯ್ಯನರದ್ದು ಏನು ಅಪ್ಪನ ಆಸ್ತಿನಾ” ಎಂಬ ಹೇಳಿಕೆಯನ್ನು ನೀಡಿರುವ ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್ ಸಿಎಂ ಸಿದ್ದರಾಮಯ್ಯನವರಿಗೆ ಕ್ಷಮೆಯಾಚಿಸಿ ಪತ್ರವನ್ನು ಬರೆದಿದ್ದಾರೆ.
“ಪಶ್ಚಾತಾಪಕ್ಕಿಂತ ದೊಡ್ಡ ಪ್ರಾಯಶ್ಚಿತ ಬೇರೊಂದಿಲ್ಲ”ವೆಂದು ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್ ಕ್ಷಮೆಯಾಚನೆ ಪತ್ರಕ್ಕೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.