ಬಳ್ಳಾರಿ: 10 ದಿನಗಳಲ್ಲಿ ಬಿ.ನಾಗೇಂದ್ರರವರು ಮತ್ತೇ ಸಚಿವರಾಗುತ್ತಾರೆ ಎಂದು ಸಚಿವ ಜಮೀರ್ ಅಹ್ಮದ್ ಹೇಳಿಕೆ ನೀಡಿದ್ದಾರೆ.
ನಗರದಲ್ಲಿಂದು ಮಾತನಾಡಿದ ಅವರು, ಯಾವುದೇ ಕ್ಷಣದಲ್ಲಿ ಆದರೂ ಸಚಿವ ಸಂಪುಟ ವಿಸ್ತರಣೆಯಾಗಬಹುದು.ನಮ್ಮ ಕೈಯಲ್ಲಿ ಏನೂ ಇಲ್ಲ.ಪಕ್ಷದ ಎಲ್ಲಾ ನಿರ್ಧಾರವನ್ನು ಹೈಕಮಾಂಡ್‌ತೆಗೆದುಕೊಳ್ಳುತ್ತದೆ ಎಂದು ಹೇಳಿದ್ದಾರೆ.
ಬಳ್ಳಾರಿ ಜಿಲ್ಲೆಯಲಲಿ ಯಾವ ಕೆಲಸಗಳು ಬಾಕಿ ಉಳಿದಿಲ್ಲ.ಎಲ್ಲವೂ ನಡೆಯುತ್ತೀವೆ.ಸಾಹಿತ್ಯ ಸಮ್ಮೇಳನ ನಡೆಸಲು 4ಸ್ಥಳಗಳನ್ನು ಫೈನಲ್ ಮಾಡಿದ್ದು, ಸ್ಥಳ ಪರಿಶೀಲನೆ ನಡೆಯುತ್ತಿದೆ. ಬಳ್ಳಾರಿ ಜಿಲ್ಲೆಯಲ್ಲಿ ಅದ್ದೂರಿಯಾಗಿ ಸಾಹಿತ್ಯ ಸಮ್ಮೇಳನ ಮಾಡುತ್ತೇವೆ ಎಂದು ಹೇಳಿದ್ದಾರೆ.
ಅದೇ ಸಮಯದಲ್ಲಿ ಸಿಎಂ ಸಿದ್ದರಾಮಯ್ಯನವರು ಇನ್ನೂ 5 ವರ್ಷ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಲಿದ್ದಾರೆ ಎಂದು ತಿಳಿಸಿದ್ದಾರೆ.
