ಮುಂಬೈ: ಬಾಲಿವುಡ್ ಬಾಯಿಜಾನ್ ಎಂಬ ಖ್ಯಾತಿಯನ್ನು ಪಡೆದಿರುವ ಸಲ್ಮಾನ್ ಖಾನ್‌ಗೆ ಮತ್ತೊಂದು ಬೆದರಿಕೆ ಕರೆ ಬಂದಿದೆ.ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನಿಂದ ಈಗಾಗಲೇ ಬೆದರಿಕೆ ಎದುರಿಸುತ್ತಿರವ ಬಾಯಿಜಾನ್‌ಗೆ ಲಾರೆನ್ಸ್ ಬಿಷ್ಣೋಯ್ ಸಹೋದರ ಮತ್ತೊಂದು ಹೊಸ ಬೆದರಿಕೆಯನ್ನು ಹಾಕಿದ್ದಾನೆ ಎನ್ನಲಾಗಿದೆ.
ಕಳೆದ ಹತ್ತು ದಿನಗಳಲ್ಲಿ ಸಲ್ಮಾನ್ ಖಾನ್‌ಗೆ ಮೂರು ಬಾರಿ ಬೆದರಿಕೆಗಳು ಬಂದಿವೆ ಎನ್ನಲಾಗಿದ್ದು, ಮುಂಬೈನ ಸಂಚಾರಿ ಪೊಲೀಸ್ ಅಧಿಕಾರಿಗೆ ಕರೆ ಬಂದಿದ್ದು, ನಟ ಸಲ್ಮಾನ್ ಖಾನ್ ದೇವಸ್ಥಾನಕ್ಕೆ ಹೋಗಿ ತಪ್ಪಾಯ್ತು ಎಂದು ಕ್ಷಮೆ ಕೇಳ್ಬೇಕು, ಇಲ್ಲವಾದಲ್ಲಿ 5 ಕೋಟಿ ರೂ.ನೀಡಬೇಕೆಂದು ಇವೆರಡು ಆಗದಿದ್ದ ಪಕ್ಷದಲ್ಲಿ ಕೊಲೆ ಮಡಲಾಗುತ್ತದೆ ಎಂದು ಹೇಳಿದ್ದಾರೆ.ಈ ಕರೆಯು ಲಾರೆನ್ಸ್ ಬಿಷ್ಣೋಯ್ ಅವರ ಸಹೋದರ ಎಂದ ಹೇಳುವುದರ ಮೂಲಕ ಬೆದರಿಕೆಯನ್ನು ಹಾಕಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಬೆದರಿಕೆ ಸಂದೇಶ ಬಂದಿರುವ ಹಿನ್ನೆಲೆಯಲ್ಲಿ ತನಿಖೆಯನ್ನು ನಡೆಸುತ್ತಿದ್ದು, ಸಂದೇಶ ರವಾನೆ ಮಾಡುತ್ತಿರುವವರ ಹುಡುಕಾಟ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದು, ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದಿಕ್ ಹತ್ಯೆಯ ಬಳಿಕ ನಟನ ಭದ್ರತೆಯನ್ನು ಹೆಚ್ಚಿಸಲಾಗಿದೆ.