ಬೆಂಗಳೂರು: 3 ಕ್ಷೇತ್ರಗಳ ಉಪಚುನಾವಣೆಗೆ ದಿನಾಂಕ ನಿಗದಿಯಾದ ಬಳಿಕ ಮಾಜಿ ಸಿಎಂ ಮತ್ತು ಸಂಸದರಾಗಿರುವಂತಹ ಬಸವರಾಜ ಬೊಮ್ಮಾಯಿಯವರು ಬಿಜೆಪಿ ಸಂಸದೀಯ ಸದಸ್ಯರಾದ ಬಿಎಸ್‌ ಯಡಿಯೂರಪ್ಪನವರನ್ನು ಭೇಟಿ ಮಾಡಿ ಶಿಗ್ಗಾಂವಿ ಕ್ಷೇತ್ರದಿಂದ ತಮ್ಮ ಪುತ್ರ ಭರತ್‌ ಸ್ಪರ್ಧಿಸಲು ಅವಕಾಶ ನೀಡಬೇಕೆಂದು ಬೇಡಿಕೆಯನ್ನು ಇಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಬಿಎಸ್‌ ಯಡಿಯೂರಪ್ಪನವರನ್ನು ಭೇಟಿ ಮಾಡಿದ ನಂತರ ಮಾತನಾಡಿದ ಬೊಮ್ಮಾಯಿಯವರು, ಬಿಎಸ್‌ ಯಡಿಯೂರಪ್ಪನವರ ನಮ್ಮ ಪಕ್ಷದ ಹಿರಿಯ ನಾಯಕರು. ಆದ್ದರಿಂದ ನಾವು ಭೇಟಿಯಾಗಿ ಕೆಲವು ವಿಷಯಗಳನ್ನು ಚರ್ಚಿಸಿದ್ದೇವೆ.ಶಿಗ್ಗಾಂವಿ ಕ್ಷೇತ್ರದಲ್ಲಿ ಯಾರಿಗೆ ಟಿಕೆಟ್‌ ನೀಡುತ್ತಾರೆಂದು ಇನ್ನೂ ತಿಳಿದಿಲ್ಲ. ಟಿಕೆಟ್‌ ಯಾರಿಗೇ ಸಿಕ್ಕರೂ ಅವರನ್ನು ಗೆಲ್ಲಿಸಬೇಕು ಎಂದು ಹೇಳಿದ್ದಾರೆ.ಅಕ್ಟೋಬರ್‌ 19ರ ನಂತರ ದೆಹಲಿಗೆ ಹೋಗ್ತೇನೆ.3ಕೇತ್ರಗಳಲ್ಲೂ ಗೆಲ್ಲುವುದಕ್ಕೆ ಪ್ರಯತ್ನಿಸೋಣ ಎಂದಿದ್ದಾರೆ.

Leave a Reply

Your email address will not be published. Required fields are marked *