ಬೆಳಗಾವಿ: ಒಂದು ಟನ್ ಕಬ್ಬಿಗೆ ಮೂವತೈದು ಸಾವಿರ ರೂಪಾಯಿ ಬೆಂಬಲ ಬೆಲೆಯನ್ನು ನಿಗದಿ ಮಾಡಲು ಅಗ್ರಹಿಸಿ ಕಬ್ಬು ಬೆಳೆಗಾರರು ನಡೆಸುತ್ತಿರುವ ಹೋರಾಟ 9 ನೇ ದಿನಕ್ಕೇ ತಲುಪಿದ್ದು, ರೈತರ ಹೋರಾಟ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ತೀವ್ರ ಸ್ವರೂಪ ಪಡೆದುಕೊಳ್ಳುವ ಸಂಭವವಿದೆ ಎಂದು ತಿಳಿದುಬಂದಿದೆ.
ಬೆಳಗಾವಿ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಪ್ರತಿಭಟನೆ ತೀವ್ರಗೊಳ್ಳುತ್ತಿದ್ದು, ರೈತರು ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ. ಸಕ್ಕರೆ ಕಾರ್ಖಾನೆಯ ಮಾಲೀಕರ ಜೊತೆ ಮಾತನಾಡಿ ಸಮಸ್ಯೆಯನ್ನು ಶೀಘ್ರವಾಗಿ ಬಗೆಹರಿಸುವಂತೆ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಕಬ್ಬು ಬೆಳೆಗಾರರ ಹೋರಾಟವೂ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಗೋಕಾಕ್-ಧಾರವಾಡ-ಥಣಿ ರಸ್ತೆಯನ್ನು ತಡೆಯಲು ಮುಂದಾಗಿದ್ದರು.ಆ ವೇಳೆ ಸ್ಥಳದಲ್ಲಿದಪೊಲೀಸರು ರೈತರ ಜೊತೆ ಸಂವಹನ ನಡೆಸಿ ಬಿಗುವಿನ ವಾತಾವರಣವನ್ನು ತಿಳಿಯಾಗಿಸಿದ್ದಾರೆ ಎನ್ನಲಾಗಿದೆ.
