ಬೆಂಗಳೂರು: ಬಳ್ಳಾರಿಯಲ್ಲಿ ಬ್ಯಾನರ್ ಕಟ್ಟುವ ವಿಚಾರಕ್ಕೆ ಗಲಾಟೆಯ ವೇಳೆ ಫೈರಿಂಗ್ ನಡೆದು ಕಾಂಗ್ರೆಸ್ ಕಾರ್ಯಕರ್ತಸಾವನ್ನಪ್ಪಿರುವ ಪ್ರಕರಣದ ಹಿನ್ನೆಲೆ 26 ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ ಎಂದು ತಿಳಿದುಬಂದಿದೆ.
ಬಳ್ಳಾರಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ 26 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು.ಇದೀಗ ಬೆಂಗಳೂರು ನಗರದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ 26 ಆರೋಪಿಗಳನ್ನು ಹಾಜರುಪಡಿಸಿದ್ದಾರೆ ಎನ್ನಲಾಗಿದೆ.
ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ 26 ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ನೀಡಲು ಆದೇಶ ನೀಡಿದೆ.
