ಬೆಂಗಳೂರು: ಬಿಜೆಪಿ ಪಕ್ಷದ ನಾಯಕರ ವಿರುದ್ದ ಟ್ವೀಟ್ಟರ್ ನಲ್ಲಿ ವಾಗ್ದಾಳಿ ನಡೆಸಿದ ಸಿಎಂ ಸಿದ್ದರಾಮಯ್ಯ ಹೀಗೆ ಬರೆದುಕೊಂಡಿದ್ದಾರೆ.”ನಕಲಿ ಹಿಂದೂ ಪ್ರೇಮದ ಮೊಸಳೆ ಕಣ್ಣೀರುಬಟಾ ಬಯಲಾಗಿದೆ”
“2019”ರಿಂದ ರಾಜಯ್ದಲ್ಲಿ ಆಡಳಿತ ನಡೆಸಿದ ಬಿಜೆಪಿ ಸರ್ಕಾರದ ಅವಧಿಯಲ್ಲಿ ವಕ್ಫ್ ಬೋರ್ಡ್ ವಿಜಯಪುರದ ರೈತರಿಗೆ ನೀಡಿದ ನೋಟಿಸುಗಳಿವು! ಆಗ ಇರದ ಹಿಂದೂ ಪ್ರೇಮ ಈಗ ಕಪೋಲ ಕಲ್ಪಿತ ಸುಳ್ಳುಗಳ ಆಧಾರದ ಮೇಲೆ ಚಿಗುರೊಡೆದಿದ್ದು ಹೇಗೆ?
ವಿಜಯೇಂದ್ರರವರ ಸತ್ಯಶೋಧನಾ ಸಮಿತಿ(ಅತ್ತು-ಗೋಗರೆದು ರಚನೆಗೊಂಡ ಪರಿಷ್ಕೃತ ಸತ್ಯಶೋಧನಾ ಸಮಿತಿ) ಅವರ ಸರ್ಕಾರದ ಅವಧಿಯಲ್ಲಿ ನಮ್ಮ ರೈತರಿಗೆ ಕಳುಹಿಸಿದ ನೋಟಿಸುಗಳಿಗೆ ಉತ್ತರ ಕೊಡಲಿ ಎಂದು ಸಿಎಂ ಸಿದ್ದರಾಮಯ್ಯಟ್ವೀಟ್ ಮೂಲಕ ಬಿಜೆಪಿ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.