ಬೆಂಗಳೂರು: ಮುಂದಿನ ದಿನಗಳಲ್ಲಿ ಮೀಸಲಾತಿಯನ್ನು ಅಂತ್ಯಗೊಳಿಸಲಾಗುವುದು ಎಂಬ ಹೇಳಿಕೆಯನ್ನು ನೀಡಿರುವ ರಾಹುಲ್ ಗಾಂಧಿಯವರ ವಿರುದ್ದ ಬಿಜೆಪಿ ಪ್ರತಿಭಟನೆಯನ್ನು ನಡೆಸಿ ಹೈಡ್ರಾಮವನ್ನು ಮಾಡಿರುವ ಘಟನೆಯು ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ನಡೆದಿದೆ.
ಬೆಂಗಳೂರಿನ ಫ್ರೀಂಡಂ ಪಾರ್ಕಿನಲ್ಲಿ ಬಿಜೆಪಿ ಪಕ್ಷವು ಎಸ್ಸಿಎಸ್ಟಿ ಮೋರ್ಚಾ ನೇತೃತ್ವದಲ್ಲಿ ಪ್ರತಿಭಟನೆಯನ್ನು ಮಾಡಲಾಗಿದ್ದು ಎಸ್ಸಿಎಸ್ಟಿ ಮೋರ್ಚಾದ ರಾಜ್ಯ ಅಧ್ಯಕ್ಷರಾದ ಸಿಮೆಂಟ್ ಮಂಜುನಾಥ್, ಮತ್ತು ಬಂಗಾರು ಹನುಮಂತು ಉಪಸ್ಥಿತರಿದ್ದರು ಎನ್ನಲಾಗಿದೆ.
ಅಮೇರಿಕಾದಲ್ಲಿ ರಾಹುಲ್ ಗಾಂಧಿಯು ಎಸ್ಸಿಎಸ್ಟಿ ಮೀಸಲಾತಿಯ ಬಗ್ಗೆ ನೀಡಿದಂತಹ ಹೇಳಿಕೆಯ ಕುರಿತಾಗಿ ಅವರ ವಿರುದ್ದ ಘೋಷಣೆಗಳನ್ನು ಕೂಗಿ ಆಕ್ರೋಶವನ್ನು ವ್ಯಕ್ತಪಡಿಸುವುದಲ್ಲದೆ ಅವರ ಪ್ರತಿಕೃತಿಯನ್ನು ದಹನ ಮಾಡಲು ಮುಂದಾಗಿರುವ ವೇಳೆ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆದಿದೆ ಎಂದು ತಿಳಿದುಬಂದಿದೆ.