ಬೆಂಗಳೂರು: ನಗರದ ಪ್ರತಿಷ್ಟಿತ ಹೋಟೆಲ್ ಆದ ತಾಜ್ ವೆಸ್ಟ್ ಎಂಡ್‌ಗೆ ಅಪರಿಚಿತ ದುಷ್ಕರ್ಮಿಗಳಿಂದ ಇ-ಮೇಲ್ ಮೂಲಕ ಬಾಂಬ್ ಬೆದರಿಕೆಯ ಸಂದೇಶವನ್ನು ರವಾನೆ ಮಾಡಿದ್ದಾರೆಂದು ಎಎನ್‌ಐ ವರದಿ ಮಾಡಿದೆ.
ಅಪರಿಚಿತ ದುಷ್ಕರ್ಮಿಗಳು ಕಳುಹಿಸಿದ ಸಂದೇಶವನ್ನು ಗಮನಿಸಿದ ಹೋಟೆಲ್ ಸಿಬ್ಬಂದಿ ತಕ್ಷಣ ಪೊಲೀಸರಿಗೆ ಮಾಹಿತಿಯನ್ನು ತಿಳಿಸಿದ್ದರು. ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಪೊಲೀಸರು ಮತ್ತು ಬಾಂಬ್ ನಿಷ್ಕ್ರಿಯ ದಳದವರು ಭೇಟಿ ನೀಡಿ ಸ್ಥಳವನ್ನು ಪರಿಶೀಲನೆ ನಡೆಸುತ್ತಿದ್ದಾರೆ.
ಸ್ಥಳೀಯ ಪೊಲೀಸರು ಮತ್ತು ಬಾಂಬ್ ನಿಷ್ಕ್ರಿಯ ದಳದವರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಲಾಗುತ್ತಿದೆ’ ಎಂದು ಬೆಂಗಳೂರು ಕೇಂದ್ರ ಡಿಸಿಪಿ ಶೇಖರ್ ಮಾಹಿತಿಯನ್ನು ನೀಡಿದ್ದಾರೆ.