ಬಿಗ್ ಕನ್ನಡ ನ್ಯೂಸ್ ಡೆಸ್ಕ್ (17-02-2023): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮ್ಮ ಸರ್ಕಾರದ ಕಡೇ ಬಜೆಟ್ ಅನ್ನು ಸದನದಲ್ಲಿ ಸಿ.ಎಂ ಮಂಡಿಸಿದರು. ಚುನಾವಣಾಪೂರ್ವ ಬಜೆಟ್ ಬಗ್ಗೆ ಸಾರ್ವಜನಿಕರಲ್ಲಿ ತೀವ್ರ ಕುತೂಹಲವಿತ್ತು.‌ ಈ ಬಜೆಟ್ ನಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಜನರಿಗೆ ಬೊಮ್ಮಾಯಿ ಬಜೆಟ್ ನಲ್ಲಿ ದಕ್ಕಿದ್ದೇನು? ಎಂಬ ಇಲ್ಲಿದೆ ಸಂಪೂರ್ಣ ಮಾಹಿತಿ.

  • ಕರ್ನಾಟಕ ಪರಿಶಿಷ್ಟ ಜಾತಿ ಉಪ ಯೋಜನೆ ಮತ್ತು ಪರಿಶಿಷ್ಟ ಪಂಗಡ ಉಪ ಯೋಜನೆ ಕಾಯ್ದೆ 2013ರ ಅನುಷ್ಠಾನದ 10 ವರ್ಷಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಕಲ್ಯಾಣಕ್ಕಾಗಿ ಹಲವಾರು ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ಈ ಕಾಯ್ದೆಯನ್ನು ಇನ್ನಷ್ಟು ಸುಧಾರಿಸಲು ಸೆಕ್ಷನ್ 7(0) ಪರಿಷ್ಕರಣೆ ಸೇರಿದಂತೆ ಹಲವಾರು ಸಲಹೆಗಳು ಬಂದಿವೆ. ಈ ಸಲಹೆಗಳನ್ನು ಗಂಭೀರವಾಗಿ ಪರಿಗಣಿಸಿ, ಅವುಗಳನ್ನು ಜಾರಿಗೊಳಿಸಲು ಕ್ರಮ ಕೈಗೊಳ್ಳಲಾಗುವುದು. ಈ ನಡೆಯು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರ ಕ್ಷೇಮಾಭಿವೃದ್ಧಿ ಕುರಿತು ನಮ್ಮ ಸರ್ಕಾರಕ್ಕೆ ಇರುವ ಬದ್ಧತೆಗೆ ನಿದರ್ಶನವಾಗಿದೆ ಎಂದು ಸರ್ಕಾರ ತಿಳಿಸಿದೆ.‌
  • ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಜಮೀನನ್ನು ಸಂರಕ್ಷಿಸಲು ಈಗಿರುವ ಕಾನೂನು ತೊಡಕುಗಳನ್ನು ನಿವಾರಿಸಲು PTCL ಕಾಯ್ದೆಗೆ ಸೂಕ್ತ ತಿದ್ದುಪಡಿ ತರಲಾಗುವುದು.
  • ಅಮೃತ ಜ್ಯೋತಿ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಬಿಪಿಎಲ್ ಕುಟುಂಬಗಳಿಗೆ ಮಾಸಿಕ 75 ಯೂನಿಟ್ ಉಚಿತ ವಿದ್ಯುತ್‌ ಸೌಲಭ್ಯವನ್ನು ಕಲ್ಪಿಸಲಾಗಿದೆ.
  • ಗಂಗಾಕಲ್ಯಾಣ ಯೋಜನೆಯಡಿ ವಿವಿಧ ನಿಗಮಗಳ ಮೂಲಕ 17,000 ಫಲಾನುಭವಿಗಳಿಗೆ 675 ಕೋಟಿ ರೂ. ಸಹಾಯಧನವನ್ನು 3.29.83. ಮೂಲಕ ಅನುಷ್ಠಾನಗೊಳಿಸುವ ಗುರಿ ಹೊಂದಲಾಗಿದೆ.
  • ಸಮಾಜ ಕಲ್ಯಾಣ, ಪರಿಶಿಷ್ಟ ಪಂಗಡಗಳ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳಿಂದ ಸರ್ಕಾರಿ ಉದ್ಯೋಗಕ್ಕೆ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ 9,500 ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ.
  • ಗ್ರಾಮೀಣ ಪ್ರದೇಶದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ವಸತಿ ಯೋಜನೆಗಳಲ್ಲಿ ಘಟಕ ಸಹಾಯಧನ 1.75 ಲಕ್ಷ ರೂ. ಗಳಿಂದ 2 ಲಕ್ಷ ರೂ. ಗಳಿಗೆ ಹೆಚ್ಚಳ ಮಾಡಲಾಗಿದೆ.
  • ಭೂ ಒಡೆತನ ಯೋಜನೆಯಡಿ ಘಟಕ ವೆಚ್ಚದ ಮೊತ್ತವನ್ನು 15 ಲಕ್ಷ ರೂ. ಗಳಿಂದ 20 ಲಕ್ಷ ರೂ. ಗಳಿಗೆ ಹಾಗೂ ಬೆಂಗಳೂರು ನಗರ, ಗ್ರಾಮಾಂತರ, ಚಿಕ್ಕಬಳ್ಳಾಪುರ, ರಾಮನಗರ ಜಿಲ್ಲೆಗಳಲ್ಲಿ 25 ಲಕ್ಷ ರೂ. ಗಳಿಗೆ ಹೆಚ್ಚಿಸಲಾಗಿದೆ.
  • ಮೊದಲ ಬಾರಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಯುವಕರು ಸ್ವಯಂಉದ್ಯೋಗ ಕೈಗೊಳ್ಳಲು ವಿದ್ಯುತ್‌ ಚಾಲಿತ ತ್ರಿಚಕ್ರ ಸರಕು ವಾಹನ ಖರೀದಿಗೆ 50 ಸಾವಿರ ರೂ. ಧನ ಸಹಾಯ ನೀಡುವ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಈ ಯೋಜನೆಯನ್ನು ಮುಂದುವರೆಸಿ ಬಾಬು ಜಗಜೀವನ್‌ ರಾಮ್ ಸ್ವಯಂ ಉದ್ಯೋಗ ಯೋಜನೆ ಯಡಿಯಲ್ಲಿ ಎಲೆಕ್ನಿಕ್‌ ತ್ರಿಚಕ್ರ ಅಥವಾ ನಾಲ್ಕು ಚಕ್ರದ ಸರಕು ವಾಹನಗಳನ್ನು ಖರೀದಿಸಲು ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 100 ಫಲಾನುಭವಿಗಳಿಗೆ ಶೇ.50 ರಷ್ಟು 2 ಲಕ್ಷ ರೂ. ವರೆಗೂ ಸಹಾಯಧನವನ್ನು ನೀಡಲಾಗುವುದು. ಇದಕ್ಕಾಗಿ 400 ಕೋಟಿ ರೂ. ವೆಚ್ಚವಾಗಲಿದೆ.
  • ರಾಜ್ಯದಲ್ಲಿ ಗಂಗಾ ಕಲ್ಯಾಣ ಯೋಜನೆಯ ಅನುಷ್ಠಾನವು ಬೇರೆ ಬೇರೆ ಕಾರಣಗಳಿಂದ ವಿಳಂಬವಾಗುತ್ತಿದ್ದು, ಇದನ್ನು ಬಗೆಹರಿಸಿ e-Rupee ಮೂಲಕ ನೇರವಾಗಿ ಫಲಾನುಭವಿಗಳಿಗೆ ಹಣ ಪಾವತಿಸಲು ಕ್ರಮವಹಿಸಲಾಗಿದೆ.
  • ಮೆಟ್ರಿಕ್‌ ನಂತರದಲ್ಲಿ ಶಾಲೆಯಿಂದ ಹೊರಗುಳಿಯುವಂತಹ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳ ಸಂಖ್ಯೆಯನ್ನು ತಗ್ಗಿಸಲು 100 ಕ್ರೈಸ್ ವಸತಿ ಶಾಲೆಗಳನ್ನು ಉನ್ನತೀಕರಿಸಿ ಪದವಿ ಪೂರ್ವ ಶಿಕ್ಷಣ ಪ್ರಾರಂಭಿಸಲಾಗುವುದು.
  • ಪ್ರಸ್ತುತ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಗುತ್ತಿಗೆದಾರರಿಗೆ 50 ಲಕ್ಷ ರೂ. ಗಳ ವರೆಗಿನ ಸಣ್ಣ ಕಾಮಗಾರಿಗಳಲ್ಲಿ ಶೇ.24ರವರೆಗೆ ಮೀಸಲಾತಿ ನಿಗದಿಪಡಿಸಿದ್ದು, ಈ ಮೊತ್ತವನ್ನು ಒಂದು ಕೋಟಿ ರೂ. ವರೆಗೆ ಹೆಚ್ಚಿಸಲಾಗುವುದು.
  • ವಸತಿ ಶಾಲೆಗಳಲ್ಲಿನ ಕ್ರೀಡಾ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡುವ ದೃಷ್ಟಿಯಿಂದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳಿಗೆ ಸೇರಿದ ಒಟ್ಟು 10 ಕ್ರೈಸ್ ವಸತಿ ಶಾಲೆಗಳಲ್ಲಿ, ಒಂದು ಶಾಲೆಗೆ ಒಂದರಂತೆ, ಉತ್ಕೃಷ್ಟ ಮಟ್ಟದ ಕ್ರೀಡಾ ಸೌಲಭ್ಯವನ್ನು 10 ಕೋಟಿ ರೂ. ವೆಚ್ಚದಲ್ಲಿ ಒದಗಿಸಲಾಗುವುದು.
  • ಪರಿಶಿಷ್ಟ ಪಂಗಡದ ಮಕ್ಕಳಿಗೆ ವಿದ್ಯಾರ್ಥಿನಿಲಯಗಳು ಇಲ್ಲದೇ ಇರುವ ಜಿಲ್ಲಾ ಕೇಂದ್ರಗಳಲ್ಲಿ ಮೆಟ್ರಿಕ್ 14 ಕೋಟಿ ವಿದ್ಯಾರ್ಥಿನಿಲಯಗಳನ್ನು ಪ್ರಾರಂಭಿಸಲಾಗುವುದು. 6 ನಂತರದ ವೆಚ್ಚದಲ್ಲಿ ಪ್ರಾರಂಭಿಸಲಾಗುವುದು.
  • ರಾಷ್ಟ್ರೀಯ ಶಿಕ್ಷಣ ಸಂಸ್ಥೆಗಳಾದ IIT, IIM, IISc, NIT ಮುಂತಾದ ಸಂಸ್ಥೆಗಳಲ್ಲಿ ಪ್ರವೇಶ ಪಡೆಯುವ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ 2 ಲಕ್ಷ ರೂ. ಗಳ ಪ್ರೋತ್ಸಾಹಧನ ನೀಡುತ್ತಿದ್ದು, ಸದ್ಯ ಪ್ರೋತ್ಸಾಹಧನದ ಮೊತ್ತವನ್ನು 4 ಲಕ್ಷ ರೂ. ಗಳಿಗೆ ಹೆಚ್ಚಿಸಲಾಗುವುದು.
  • ISEC ಸಂಸ್ಥೆಯಲ್ಲಿ ಪಿ.ಹೆಚ್.ಡಿ ಮಾಡುವ 5 ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ವಿದ್ಯಾರ್ಥಿಗಳಿಗೆ ಡಾ| ಬಿ.ಆರ್. ಅಂಬೇಡ್ಕರ್ ಫೆಲೋಶಿಪ್ ನೀಡಲು 2 ಕೋಟಿ ರೂ Corpus Fund ಸ್ಥಾಪಿಸಲಾಗುವುದು.
  • ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನಿರುದ್ಯೋಗಿಗಳಿಗೆ ವಿವಿಧ ಆದಾಯ ಬರುವ ಚಟುವಟಿಕೆಗಳನ್ನು ಕೈಗೆತ್ತಿಕೊಳ್ಳಲು ವಾಣಿಜ್ಯ ಬ್ಯಾಂಕ್‌ಗಳಿಂದ ಪಡೆಯುವ ಗರಿಷ್ಠ 10 ಲಕ್ಷ ರೂ. ವರೆಗಿನ ಸಾಲವನ್ನು ಶೇ.4ರಷ್ಟು ಬಡ್ಡಿ ದರದಲ್ಲಿ ದೊರಕಿಸಲು ಸರ್ಕಾರದ ವತಿಯಿಂದ ಬಡ್ಡಿ ಸಹಾಯಧನ ನೀಡಲಾಗುವುದು.
  • ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತ ವರ್ಗಗಳಿಗೆ ಸೇರಿದ 10,000 ಯುವ ಜನರು ಭಾರತೀಯ ಸೇನೆಯಲ್ಲಿ ಅಗ್ನಿವೀರರಾಗಿ ನೇಮಕಾತಿ ಹೊಂದಲು ಉಚಿತ ತರಬೇತಿ ನೀಡಲಾಗುವುದು.
  • ಸಫಾಯಿ ಕರ್ಮಚಾರಿಗಳಿಗೆ ರಾಜೀವ್‌ಗಾಂಧಿ ವಸತಿ ನಿಗಮದ ವತಿಯಿಂದ ವಸತಿ ಸೌಲಭ್ಯವನ್ನು ನೀಡಲು ಕ್ರಮ ವಹಿಸಲಾಗುವುದು.
  • ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳಿಗೆ ಸೇರಿದ ವಿವಿಧ 6 ಅಭಿವೃದ್ಧಿ ನಿಗಮಗಳಿಗೆ ನೀಡುತ್ತಿರುವ ಅನುದಾನವನ್ನು ಕಳೆದ ವರ್ಷಕ್ಕಿಂತ ಗಣನೀಯವಾಗಿ ಹೆಚ್ಚಿಸಿ, ಪ್ರಸಕ್ತ ಸಾಲಿನಲ್ಲಿ 795 ಕೋಟಿ ರೂ. ಒದಗಿಸಲಾಗುವುದು, ನಿಗಮಗಳಿಗೆ ನೀಡಿರುವ ಹೆಚ್ಚುವರಿ ಅನುದಾನ ಮತ್ತು ಈಗಾಗಲೇ ಲಭ್ಯವಿರುವ ಮೊತ್ತವೂ ಸೇರಿದಂತೆ 2023-24ರಲ್ಲಿ ಒಟ್ಟು 1,842 ಕೋಟಿ ರೂ. ಗಳ ವೆಚ್ಚದಲ್ಲಿ ವಿವಿಧ ಯೋಜನೆಗಳನ್ನು ಅನುಷ್ಟಾನಗೊಳಿಸಲಾಗುವುದು‌.
  • 2023-24ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಅಭ್ಯುದಯಕ್ಕೆ ಪರಿಶಿಷ್ಟ ಜಾತಿ ಉಪಯೋಜನೆ ಹಾಗೂ ಪರಿಶಿಷ್ಟ ಪಂಗಡ ಉಪಯೋಜನೆಯಡಿ ಒಟ್ಟು 30,215 ಕೋಟಿ ರೂ. ಒದಗಿಸಲಾಗಿದೆ. ಪರಿಶಿಷ್ಟ ಜಾತಿ ಉಪ ಯೋಜನೆಗೆ 21,343 ಕೋಟಿ ರೂ. ಹಾಗೂ ಪರಿಶಿಷ್ಟ ಪಂಗಡ ಉಪ ಯೋಜನೆಯಡಿ 8,872 ಕೋಟಿ ರೂ. ಒದಗಿಸಲಾಗಿದೆ.

Leave a Reply

Your email address will not be published. Required fields are marked *