ಬೆಂಗಳೂರು: ಚನ್ನಪಟ್ಟಣ ಉಪಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಯ ಹೆಸರನ್ನು ಬಹಿರಂಗ ಮಾಡಿದ ಎನ್‌ಡಿಎ , ಜೆಡಿಎಸ್ ಪಕ್ಷದ ಯುವನಾಯಕ ನಿಖಿಲ್ ಕುಮಾರಸ್ವಾಮಿ ಹೆಸರನ್ನು ಅಧಿಕೃತವಾಗಿ ಘೋಷಿಸಿದ ಬಿಎಸ್ ಯಡಿಯೂರಪ್ಪ.
ನಗರದ ಡಾಲರ್ಸ್ ಕಾಲೋನಿಯಲ್ಲಿರುವ ದವಳಗಿರಿ ನಿವಾಸದಲ್ಲಿ ಬಿಜೆಪಿ ಮತ್ತು ಜೆಡಿಎಸ್ ನಾಯಕರ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ , ಚನ್ನಪಟ್ಟಣ ಕ್ಷೇತ್ರದಲ್ಲಿ ನಿಖಿಲ್ ಕುಮಾರಸ್ವಾಮಿಯನ್ನು ಎನ್‌ಡಿಎ ಅಭ್ಯರ್ಥಿಯಾಗಿ ಚುನಾವಣಾ ಕಣಕ್ಕೆ ಇಳಿಸುವ ನಿರ್ಧಾರವನ್ನು ಮಾಡಿದ್ದಾರೆ ಎಂದು ತಿಳಿಸಿದ್ದಾರೆ.
ಯುವ ನಾಯಕ ನಿಖಿಲ್ ಕುಮಾರಸ್ವಾಮಿಗೆ ಪ್ರಧಾನಿ ಮೋದಿ, ದೇವೇಗೌಡರ ಆಶೀರ್ವಾದದಿಂದ ಗೆಲುವನ್ನು ಸಾಧಿಸ್ತಾರೆ.ಅವರು ಗೆಲ್ಲುವುದು ಖಚಿತ, ನೂರಕ್ಕೆನೂರರಷ್ಟು ಗೆಲ್ತಾರೆ ಎಂದು ಯಡಿಯೂರಪ್ಪ ವಿಶ್ವಾಸವನ್ನ ವ್ಯಕ್ತಪಡಿಸಿದ್ದಾರೆ.