ಜೆಡಿಎಸ್ ಕ್ಷೇತ್ರವಾದ ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಿಪಿ ಯೋಗೇಶ್ವರ್ ನಾಮಪತ್ರವನ್ನು ಸಲ್ಲಿಸಿದ್ದಾರೆ.
ನಾಮಪತ್ರ ಸಲ್ಲಿಕೆಗೂ ಮುನ್ನ ಕಾಂಗ್ರೆಸ್ ರೋಡ್ ಶೋ ನಡೆಸಿದ್ದು, ಕಾಂಗ್ರೆಸ್ ಪಕ್ಷ ಸಚಿವರು, ಶಾಸಕರು, ಹಾಗೂ ಪಕ್ಷದ ಮುಖಂಡರು , ಕಾರ್ಯಕರ್ತರು ಭಾಗಿಯಾಗಿದ್ದರು.
ನಾಮಪತ್ರ ಸಲ್ಲಿಸಿದ ನಂತರ ಮಾತನಾಡಿದ ಸಿಪಿ ಯೋಗೇಶ್ವರ್ ಬಿಜೆಪಿ ನನಗೆ ಟಿಕೆಟ್ ಕೊಡಲ್ಲ ಎನ್ನುವುದು ನನಗೆ ಮೊದಲೇ ತಿಳಿದಿತ್ತು. ಅದರೂ ನಿನ್ನೆವರಗೂ ಕಾದಿದ್ದೇ ಎಂದು ಹೇಳಿದ್ದಾರೆ.
ಬಿಜೆಪಿಯವರು ನನ್ನ ವಿರುದ್ದ ರಾಜಕೀಯ ಷಡ್ಯಂತ್ರವನ್ನು ಮಾಡಿತ್ತು. ಸ್ವಲ್ಪ ದಿನ ಅಲ್ಲೇ ಇದ್ದಿದ್ದರೆ ನನ್ನನ್ನು ರಾಜಕೀಯವಾಗಿ ಮುಗಿಸಲು ಸಂಚು ಮಾಡಲಾಗಿತ್ತು ಎಂದು ಆರೋಪ ಮಾಡಿದ್ದಾರೆ.