ಬೆಂಗಳೂರು: ಜೆಡಿಎಸ್ ಪಕ್ಷದಿಂದ ಸ್ಪರ್ಧೆ ಮಾಡಿದರೆ ಕಷ್ಟವಾಗುತ್ತದೆ ಬಿಜೆಪಿ ಮೂಖಾಂತರ ಸ್ಪರ್ಧಿಸುವ ಆಕಾಂಕ್ಷೆಯಿದೆ ಎಂದು ಬಿಜೆಪಿ ಪರಿಷತ್ ಸದಸ್ಯ ಸಿಪಿ ಯೋಗೇಶ್ವರ ಅಭಿಪ್ರಾಯಪಟ್ಟಿದ್ದಾರೆ.
ನಗರದಲ್ಲಿಂದು ಮಾತನಾಡಿದ ಅವರು, ಚನ್ನಪಟ್ಟಣದಲ್ಲಿ ಸ್ಪರ್ಧಿಸಲು ಎನ್‌ಡಿಎ ಅವಕಾಶ ನೀಡಿದರೆ ಅಭ್ಯರ್ಥಿ ಆಗುತ್ತೇನೆ. ಆದರೆ ನಾನು ಹೆಚ್.ಡಿ,ಕೆ 3 ದಿನಗಳಿಂದ ಚರ್ಚೆಗಳನ್ನು ನಡೆಸುತ್ತಿದ್ದೇವೆ.ಜೆಡಿಎಸ್‌ನಿಂದ ಸ್ಪರ್ಧಿಸಿದರೆ ಕಷ್ಟವಾಗ್ತದೆ.ಬಿಜೆಪಿಯಿಂದ ನಿಲ್ಲಬೇಕೆಂದು ಆಸೆ ಪಟ್ಟಿದ್ದಾರೆ. ಆದರೆ ಕುಮಾರಸ್ವಾಮಿಯವರಿಗೆ ತಮ್ಮ ಮಗನಿಗೆ ಟಿಕೆಟ್ ನೀಡಬೇಕೆಂಬ ಆಸೆಯಿದೆ.ಅವರ ಮನಸ್ಸಿನಲ್ಲಿ ಆ ರೀತಿಯ ಆಸೆಯಿದ್ದರೆ ಏನು ಮಾಡೋಕ್ಕೆ ಆಗುತ್ತದೆ? ಎಂದು ಪ್ರಶ್ನಿಸಿದ್ದಾರೆ.
ಚನ್ನಪಟ್ಟಣ ಟಿಕೆಟ್ ಆಕಾಂಕ್ಷಿಗಳಾಗಿರುವ ಬಿಜೆಪಿ ಪರಿಷತ್ ಸದಸ್ಯ ಸಿಪಿ ಯೋಗೇಶ್ವರ ಮತ್ತು ಹೆಚ್.ಡಿ.ಕುಮಾರಸ್ವಾಮಿಯವರ ನಡುವೆ ಜಟಾಪಟಿ ನಡೆಯುತ್ತಿದೆ. ಈ ವಿಚಾರದ ಕುರಿತು ಹಸಿಬಿಸಿ ಚರ್ಚೆಗಳು ನಡೆಯುತ್ತಿದ್ದು ಕೆಲವು ಆರೋಪಗಳು ಕೇಳಿಬಂದಿವೆ ಎನ್ನಲಾಗುತ್ತಿದೆ.