ಬೆಂಗಳೂರು: ಐದು ವರ್ಷಗಳ ಕಾಲ ಸಿಎಂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಾರೆ.ಏಕೆಂದರೆ  ಅವರಿಗೆ ತಾಯಿ ಚಾಮುಂಡೇಶ್ವರಿ ದೇವಿಯ ಆಶೀರ್ವಾದವಿದೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ತಿಳಿದ್ದಾರೆ.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇವಿ ಚಾಮುಂಡಿ ತಾಯಿಯ ಆಶೀರ್ವಾದದಿಂದ ಮಾನ್ಯ ಸಿಎಂ ಸಿದ್ದರಾಮಯ್ಯನವರು ಎಲ್ಲಾ ಆರೋಪ ಮತ್ತು ಸಮಸ್ಯೆಗಳಿಂದ ಮುಕ್ತರಾಗಿ ಹೊರಬರುತ್ತಾರೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.

ಇತ್ತೀಚೆಗೆ ರಾಜ್ಯದಲ್ಲಿ ನಡೆಯುತ್ತಿರುವ ಬೆಳವಣಿಗೆಯನ್ನು ಗಮನಿಸಿದರೆ ಇದು ಆರೋಗ್ಯಕರವಲ್ಲ. ರಾಜ್ಯದಲ್ಲಿ ಕಾಂಗ್ರೆಸ್ಸಿಗೆ, ದೇಶದಲ್ಲಿ ಎನ್‌ಡಿಎಗೆ  ಅವಕಾಶ ನೀಡಿರುವುದು ಅಭಿವೃದ್ದಿಯ ಕಾರ್ಯಗಳನ್ನು ಮಾಡುವುದಕ್ಕೆ ಅದನ್ನು ಬಿಟ್ಟು ಆರೋಪಗಳು ಮತ್ತು ಪ್ರತ್ಯಾರೋಪಗಳನ್ನು ಮಾಡುತ್ತಾ ಕನ್ನಡಿಗರಿಗೆ ಅವಮಾನವನ್ನು ಮಾಡಲಾಗ್ತಿದೆ.ದಸರಾ ಸಂದರ್ಭದಲ್ಲಿ ನೋಂದುಕೊಂಡು ಹೇಳುತ್ತಿದ್ದೇನೆ ,  ಮೂರು ಪಕ್ಷಗಳು ಬೀದಿಯಲ್ಲಿ ಕಿತ್ತಾಡಿಕೊಳ್ಳುವುದು ಎಷ್ಟರ ಮಟ್ಟಿಗೆ ಸರಿ?ಈ ರೀತಿಯ ನಡೆಯನ್ನು ಗಮನಿಸುತ್ತಿರು ಜನರು ಪಾಠ ಕಲಿಸುತ್ತಾರೆ. ಯಾವ್ದು ಸರಿ, ಯಾವ್ದು ತಪ್ಪು ಎಂದು ಆತ್ಮಾವಲೋಕನ ಮಾಡಿಕೊಳ್ಳಿರಿ ಎಂದು 3 ಪಕ್ಷಗಳಿಗೆ ಎಚ್ಚರಿಕೆಯನ್ನು ನೀಡಿದ್ದಾರೆ. ಮುಂದಿನ ಚುನಾವಣೆ ನಡೆಯಲು ನಾಲ್ಕು ವರ್ಷಗಳಿವೆ ಎಂದಿದ್ದಾರೆ.

Leave a Reply

Your email address will not be published. Required fields are marked *