ಬೆಂಗಳೂರು: ಎಸ್.ಟಿ.ಯ ವಸತಿ ಶಾಲೆಗಳಿಗೆ ಹಾಗೂ ರಾಯಚೂರು ವಿಶ್ವವಿದ್ಯಾಲಯಕ್ಕೆ ಮಹರ್ಷಿ ವಾಲ್ಮೀಕಿ ಹೆಸರನ್ನು ಇಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಬೆಂಗಳೂರಿನ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ವಾಲ್ಮೀಕಿ ಜಯಂತಿ ಪ್ರಯುಕ್ತ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಿಯೋಜಿಸಿದ್ದ ಕಾರ್ಯಕ್ರಮವನ್ನು ಉದ್ಘಾಟಿಸಿದ ಸಂದರ್ಭದಲ್ಲಿ 5 ಜನ ಮಹನ್ ವ್ಯಕ್ತಿಗಳಿಗೆ ವಾಲ್ಮೀಕಿ ಪ್ರಶಸ್ತಿಯನ್ನು ನೀಡಿದ ಬಳಿಕ ಮಾತನಾಡಿದ್ದಾರೆ.
ವಾಲ್ಮೀಕಿ ಸಮುದಾಯದಲ್ಲಿ ಎಲ್ಲರಿಗೂ ಸಮಪಾಲು, ಸಮಬಾಳು ಎನ್ನುವ ತತ್ವಗಳನ್ನು ಸಾರಿದ್ದಾರೆ.ಎಸ್.ಸಿ.ಎಸ್.ಟಿ ಸಮುದಾಯದ ವಿದ್ಯಾರ್ಥಿಗಳಿಗೆ ವಸತಿ ಶಾಲೆಗಳನ್ನು ಮೊಟ್ಟಮೊದಲು ಸ್ಥಾಪನೆ ಮಾಡಿದ್ದು ನಾನು. ಪ್ರತಿ ಜಿಲ್ಲೆಗೂ ಪ್ರತಿ ಹೋಬಳಿಯಲ್ಲೂ ಒಂದೊಂದು ವಸತಿ ಶಾಲೆ ಇರುವಂತೆ ಮಾಡುತ್ತೆನೆಂದು ಹೇಳಿಕೆಯನ್ನು ನೀಡಿದ್ದಾರೆ.
ಶಾಕುಂತಲಾ ನಾಟಕವನ್ನು ಬರೆದ ಕಾಳಿದಾಸ ಕುರುಬ ಸಮುದಾಯದವರಾದರೆ. ಮಹಾಭಾರತವನ್ನು ಬರೆದ ವ್ಯಾಸರು ಬೆಸ್ತ ಸಮುದಾಯದವರು. ರಾಮಾಯಣವನ್ನು ಬರೆದ ಮಹರ್ಷಿ ವಾಲ್ಮೀಕಿ ಸಮುದಾಯದವರಾದರೆ. ದರೋಡೆ ಮಾಡ್ಕೊಂಡು ಓಡಾಡುತ್ತಿದ್ದ ವಾಲ್ಮೀಕಿ ರಾಮಾಯಣ ಬರೆಯಲು ಸಾಧ್ಯವಾ ಎಂದು ಕತೆ ಕಟ್ಟಿಬಿಟ್ಟರು ಎಂದು ಹೇಳಿದ ಅವರು ತಳ ಸಮುದಾಯಗಳು, ಶೂದ್ರರು ಶಿಕ್ಷಣ, ಸಂಸ್ಕೃತ ಕಲಿಯುವುದು ನಿಷಿದ್ಧವಾಗಿತ್ತು. ಇಂಥಾ ಹೊತ್ತಲ್ಲೇ ಸಂಸ್ಕೃತ ಕಲಿತು ಶ್ಲೋಕಗಳ ಮೂಲಕ ಜಗತ್ಪ್ರಸಿದ್ದ ರಾಮಾಯಣ ಮಹಾಕಾವ್ಯ ಬರೆದರಲ್ಲಾ ಇದು ಹೆಮ್ಮೆಯ ಮತ್ತು ಮಾದರಿ ಸಂಗತಿ ಎಂದಿದ್ದಾರೆ.