ಕಲಬುರ್ಗಿ : ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ನಡೆದ ಗಲಭೆಯಲ್ಲಿ ಆದ ನಷ್ಟಕ್ಕೆ ಪರಿಹಾರವನ್ನು ನೀಡಲಾಗುತ್ತದೆ ಎಂದು ಘೋಷಣೆಯನ್ನು ಮಾಡಿದ್ದಾರೆ ಸಿಎಂ ಸಿದ್ದರಾಮಯ್ಯ.
ಕಲಬುರ್ಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯನವರು,ಸಧ್ಯ ನಾಗಮಂಗಲ ಶಾಂತವಾಗಿದೆ. ಗಣೇಶ ವಿಸರ್ಜನೆ ವೇಳೆಯಲ್ಲಿ ನಡೆದ ಘಟನೆಯಲ್ಲಿ ಆದ ನಷ್ಟಕ್ಕೆ ಪರಿಹಾರವನ್ನು ನೀಡಲಾಗುತ್ತದೆಂದು ತಿಳಿಸಿದ್ದಾರೆ. ಅದೇ ವೇಳೆಯಲ್ಲಿ ಮಾತನಾಡಿದ ಅವರು, ನಾಗಮಂಗಲದಲ್ಲಿ ನಡೆದ ಗಲಭೆಗೆ ಕಾರಣ ಪೊಲೀಸ್ ಅಧಿಕಾರಿಗಳ ವೈಫಲ್ಯವೆಂದಿದ್ದಕ್ಕೆ ಹಲವು ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಿದ್ದೇವೆ ಮತ್ತು ಅವರ ವಿರುದ್ದ ಕ್ರಮವನ್ನು ಕೈಗೊಂಡಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.