ರಾಯಚೂರು : ಮುಡಾ ಹಗರಣವನ್ನು ಮುಂದಿಟ್ಟುಕೊಂಡು ಸಿಎಂ ಸಿದ್ದರಾಮಯ್ಯನವರನ್ನು ರಾಜೀನಾಮೆ ನೀಡಿ ಎಂದು ಒತ್ತಾಯಿಸಿ ಆಗ್ರಹಿಸುತ್ತಿವೆ. ಆದರೆ ಸಿಎಂ ರಾಜೀನಾಮೆ ಕೊಡುವ ಮಾತೇಯಿಲ್ಲ, ಸಿಎಂ ಸಿದ್ದರಾಮಯ್ಯನವರು ಮುಖ್ಯಮಂತ್ರಿಗಳಾಗಿ ಮುಂದುವರೆಯುತ್ತಾರೆ ಎಂದು ಡಿಸಿಎಂ ಡಿಕೆಶಿವಕುಮಾರ್ ಸ್ಪಷ್ಟನೆಯನ್ನು ನೀಡಿದ್ದಾರೆ.
ರಾಯಚೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವಿರುತ್ತದೆ, ಸಿಎಂ ಬದಲಾವಣೆಯ ಮಾತಿಲ್ಲ, ಪ್ರತಿಪಕ್ಷದ ನಾಯಕರು ದಿನಕ್ಕೊಂದು ಹೇಳಿಕೆಗಳನ್ನು ನೀಡುತ್ತಾ ಸಿಎಂ ಸಿದ್ದರಾಮಯ್ಯನವರನ್ನು ರಾಜೀನಾಮೆ ನೀಡಲು ಒತ್ತಾಯಿಸುತ್ತಿದ್ದಾರೆ, ಆದರೆ ಹಾಗೆ ಆಗುವುದಿಲ್ಲ ಸಿದ್ದರಾಮಯ್ಯನವರೆ ಮುಂದುವರೆಯುತ್ತಾರೆ ಎಂದು ಹೇಳಿದ್ದಾರೆ.
ಹರಿಯಾಣದಲ್ಲಿ ಕಾಂಗ್ರೆಸ್ಸಿಗೆ ಸೋಲಾಗಿರುವ ವಿಚಾರಕ್ಕೆ ಪ್ರತಿಕ್ರಿಯಿಸಿರುವ ಅವರು, ಜನರು ಕೊಟ್ಟಿರುವ ತೀರ್ಪಿಗೆ ತಲೆಬಾಗುತ್ತೇವೆ. ನಾವು ಎಲ್ಲಿ ಎಡವಿದ್ದೇವೆ ಎಂದು ತಿಳಿದುಕೊಂಡು ವಿಚಾರ ನಡೆಸುತ್ತೇವೆ.ಚುನಾವಣೆ ಅಂದಮೇಲೆ ಸೋಲು ಗೆಲುವು ಇದ್ದೆ ಎಂದು ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ತಿಳಿಸಿದ್ದಾರೆ.
ಮುಡಾ ಪ್ರಕರಣದ ವಿಚಾರಕ್ಕೆ ಹಿನ್ನಡೆಯಾಗಿದೆ ಎನ್ನುವ ಹೇಳಿಕೆಗೆ ಉತ್ತರಿದ ಡಿಕೆಶಿ, ಮುಡಾ ಹಗರಣಕ್ಕೂ , ಹರಿಯಾಣ ಚುನಾವಣೆಗೂ ಯಾವುದೇ ರೀತಿಯ ಸಂಬಂಧವಿಲ್ಲ.ಕಾಂಗ್ರೆಸ್ ಪಕ್ಷದ ನಾಯಕರು ಚರ್ಚಿಸುವ ಅವಶ್ಯಕತೆಇಲ್ಲ. ಮುಡಾ ಆರೋಪ ಕುರಿತು ಈಗಾಗಲೇ ತನಿಖೆ ನಡೆಯುತ್ತಿದೆ ಎಂದು ಹೇಳಿದ್ದಾರೆ.