ಬೆಂಗಳೂರು: ಬಳ್ಳಾರಿಯಲ್ಲಿ ನಡೆದ ಘಟನೆಯ ವೇಳೆ ಫೈರಿಂಗ್‌ನಿಂದ ಕಾಂಗ್ರೆಸ್‌ ಕಾರ್ಯಕರ್ತ ಬಲಿಯಾಗಿರುವ ಘಟನೆಯ ಕುರಿತು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಳ್ಳಾರಿಯಲ್ಲಿ ಬ್ಯಾನರ್‌ ಕಟ್ಟುವ ವಿಚಾರವಾಗಿ ಜಗಳಗಳು ನಡೆಯುವ ವೇಳೆ ಫೈರಿಂಗ್‌ ನಡೆದಿದೆ. ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ.ಆ ಸಮಯದಲ್ಲಿ ರಾಜಶೇಖರಗೆ ತಗುಲಿದೆ. ಈ ವಿಚಾರವಾಗಿ ತನಿಖೆ ನಡೆಸುವಂತೆ ಪೊಲೀಸರಿಗೆ ಸೂಚಿಸಿದ್ದೇನೆ. ಯಾವ ವ್ಯಕ್ತಿಯ ಗನ್‌ ಫೈರಿಂಗ್‌ ಆಗಿದೆ ಎಂಬುದರ ತನಿಖೆ ನಡೆಸಲಿದ್ದು, ಪೊಲೀಸರ ತನಿಖೆಯಿಂದ ಸತ್ಯ ಬಯಲಿಗೆ ಬರುತ್ತದೆ ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *