ಕೊಪ್ಪಳ: ರಾಜ್ಯ ರಾಜಕೀಯ ವಲಯದಲ್ಲಿ ರಾಜ್ಯ ಸರ್ಕಾರದಲ್ಲಿ ನಡೆಯುತ್ತಿರುವ ಕುರ್ಚಿ ಕದನದ್ದೇ ಸುದ್ದಿ.ಸಿಎಂ ಸೀಟಿಗಾಗಿ ಗುದ್ದಾಟ ನಡೆಯುತ್ತಿರುವ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆಶಿವಕುಮಾರ್ ಬ್ರೇಕ್‌ಪಾಸ್ಟ್ ಮೀಟಿಂಗ್ ಮಾಡುವ ಮೂಲಕ ಎಲ್ಲಾ ಗೊಂದಲಗಳಿಗೆ ಪುಲ್‌ಸ್ಟಾಪ್ ಇಟ್ಟಿದ್ದರು.
ಈ ಬ್ರೇಕ್ ಪಾಸ್ಟ್ ಮೀಟಿಂಗ್ ಕೇವಲ ತೋರಿಕೆಗಾಗಿ ಎಂದು ಹಲವು ಶಾಸಕರು ಹೇಳಿಕೆಗಳನ್ನು ನೀಡುತ್ತಿದ್ದಾರೆ.

ಕುರ್ಚಿ ಗುದ್ದಾಟ ವಿಚಾರವನ್ನು ಮುಂದಿಟ್ಟುಕೊಂಡು ಸಿಎಂ ಸಿದ್ದರಾಮಯ್ಯನವರ ವಿರುದ್ದ ಚಾಟಿ ಬೀಸಲು ಬಿಜೆಪಿ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ತಮ್ಮ ಎಲುಬಿಲ್ಲದ ನಾಲಗೆಯನ್ನು ಹರಿಬಿಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಕೊಪ್ಪಳದಲ್ಲಿ ಸುದ್ದಿಗಾರರ ಪ್ರಶ್ನೆ ಹೀಗಿತ್ತು: ಸಿಎಂ ಸಿದ್ದರಾಮಯ್ಯನವರ ಸ್ಥಾನ ರಾಜ್ಯ ರಾಜಕೀಯದಲ್ಲಿ ಭದ್ರವಾಗಿದೆಯಾ ಎಂದು ಕೇಳಿದ ಪ್ರಶ್ನೆ ಗೆ ಉತ್ತರಿಸಿದ ಈಶ್ವರಪ್ಪ ಸಿಎಂ ಸಿದ್ದರಾಮಯ್ಯ “ನೆಗೆದುಬಿದ್ದು ಹೋಗ್ತಿದಾರೆ” ಈ ಪದಕ್ಕಿಂತ ಬೇರೆ ಪದ ಬೇಕಾ ಎಂದು ಸಿಎಂ ಸಿದ್ದರಾಮಯ್ಯ ನೆಗೆದುಬಿದ್ದು ಹೋಗ್ತಾರೆ ಎಂಬ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ.
