ಹುಬ್ಬಳ್ಳಿ : ದೀಪಾವಳಿ ಹಬ್ಬದ ಹೊತ್ತಿಗೆ ಕಾಂಗ್ರೆಸ್ ಪಕ್ಷವೂ ದಿವಾಳೀಯಾಗುತ್ತದೆ ಎಂದು ಬಿಜೆಪಿ ಎಂಎಲ್ ಸಿ ಸಿ.ಟಿ. ರವಿ ಹೊಸ ಬಾಂಬ್ ಸಿಡಿಸಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದೀಪಾವಳಿ ಹಬ್ಬದ ಒಳಗೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಬಿದ್ದೊಗಲಿದೆ. ಸಂಕ್ರಾಂತಿ ಹಬ್ಬಕ್ಕೆ ಬಹಳ ದೂರವಾಯ್ತು, ಆದ್ದರಿಂದ ದೀಪಾವಳಿಗೆ ಸರ್ಕಾರ ಪತನವಾಗುತ್ತದೆ. ನಂತರ ಯಾವ ಸರ್ಕಾರ ಬರುತ್ತದೆ, ಯಾರು ಸಿಎಂ ಆಗ್ತಾರೆ ಎಂಬುದನ್ನು ಕಾಲವೇ ತಿಳಿಸುತ್ತದೆ ಎಂಬ ಸ್ಪೋಟಕ ಹೇಳಿಕೆಯನ್ನು ನೀಡಿದ್ದಾರೆ.
ಸಿದ್ದರಾಮಯ್ಯನವರ ಸರ್ಕಾರ ಉರುಳಿಸಲು ಟೈಂ ಬಾಂಬ್ ಫಿಕ್ಸ್ ಮಾಡಲಾಗಿದ್ದು ದೀಪಾವಳಿ ಹಬ್ಬದಷ್ಟೊತ್ತಿಗೆ ಸ್ಟೋಟವಾಗುತ್ತದೆ ಎಂಬ ಹೇಳಿಕೆಯನ್ನು ನೀಡಿದ್ದಾರೆ.