ಬೆಂಗಳೂರು: ಸಿಎಂ ಸಿದ್ದರಾಮಯ್ಯನವರಿಗೆ ಕಾನೂನಿನ ಮೇಲೆ ಸ್ವಲ್ಪವಾದರೂ ಗೌರವವಿದ್ದರೆ ರಾಜೀನಾಮೆ ನೀಡಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆಗ್ರಹ ಮಾಡಿದ್ದಾರೆ.
ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯನವರು ನಾನು ಶುದ್ದ, ನನ್ನ ರಾಜಕೀಯ ಇತಿಹಾಸದಲ್ಲೇ ಒಂದೇ ಒಂದು ಕಪ್ಪುಚುಕ್ಕೆ ಇಲ್ಲ. ನಾನು ಪ್ರಮಾಣಿಕವಾಗಿ ಆತ್ಮಸಾಕ್ಷಿಗೆ ವಿರುದ್ದವಾದ ಕೆಲಸವನ್ನು ಮಾಡಿಲ್ಲ ಎಂದು ಯಾವಾಗಲೂ ಹೇಳುತ್ತಿದ್ದರು. ಆದರೀಗ ಮುಡಾ ಹಗರಣದ ಪ್ರಕರಣ ದಾಖಲಾಗಿದ್ದು ಲೋಕಾಯುಕ್ತ ಅಧಿಕಾರಿಗಳು ತನಿಖೆಯನ್ನು ನಡೆಸುತ್ತಿದ್ದರು, ನಾನ್ಯಾಕೆ ರಾಜೀನಾಮೆ ನೀಡಬೇಕೆಂದು ಭಂಡತನ ತೋರುತ್ತಿದ್ದು ನಾನು ನಿರಪರಾಧಿ ಎಂದು ತೋರ್ಪಡಿಸಿಕೊಳ್ಳುತ್ತಿದ್ದಾರೆ.ಜಟ್ಟಿ ಜಾರಿ ಕೆಳಗೆ ಬಿದ್ದರೂ ಮೀಸೆ ಮಣ್ಣು ಆಗಿಲ್ಲವೆನ್ನುವ ಜಾಯಮಾನದವರು, ಭಂಡತನವನ್ನು ಬಿಟ್ಟುರಾಜೀನಾಮೆಯನ್ನು ನೀಡಲಿ ಎಂದು ಒತ್ತಾಯಿಸಿದ್ದಾರೆ.