ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಇಬ್ಬರೂ ಸೇರಿ ಸಿದ್ದರಾಮಯ್ಯನವರನ್ನುಸಿಎಂ ಸ್ಥಾನದಿಂದ ಕೆಳಗಿಳಿಸುವ ಎಲ್ಲಾ ತಯಾರಿಗಳನ್ನು ಮಾಡಿಕೊಳ್ಳುತ್ತಿದ್ದು, ಮುಹೂರ್ತವನ್ನು ಫಿಕ್ಸ್ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ತಿಳಿಸಿದ್ದಾರೆ.
ಮುಡಾ ಪ್ರಕರಣ ಕೇಸ್ ನಾಳೆ ಶುರುವಾಗಲಿದ್ದು ವಿಚಾರಣೆಗೆ ಹಾಜರಾಗುವಂತೆ ಲೋಕಾಯುಕ್ತ ಪೊಲೀಸರು ನೋಟಿಸ್ ನೀಡಿರುವ ವಿಚಾರದ ಕುರಿತು ಪ್ರತಿಕ್ರಿಯಿಸಿರುವ ವಿಜಯೇಂದ್ರ ಸಿಎಂಸಿದ್ದರಾಮಯ್ಯನವರೂ ಮುಖ್ಯಮಂತ್ರಿಗಳಾಗಿ ವಿಚಾರಣೆಗೆ ಹಾಜತಾಗುತ್ತಾರೋ? ಇಲ್ಲಾ ಆರೋಪಿಯಾಗಿ ವಿಚಾರಣೆ ಎದುರಿಸುತ್ತಾರೋ ? ಎಂದು ಪ್ರಶ್ನೆ ಮಾಡಿದ್ದಾರೆ.
ಸಿಎಂ ಸಿದ್ದರಾಮಯ್ಯನವರ ರಾಜೀನಾಮೆ ನೀಡುವುದು ಶತಸಿದ್ದ.ಮಲ್ಲಿಕಾರ್ಜುನ್ ಖರ್ಗೆ ಮತ್ತು ಡಿಕೆಶಿವಕುಮಾರ್ ಚರ್ಚೆ ನಡೆಸಿದ್ದಾರೆ, ಸಿಎಂ ರಾಜೀನಾಮೆಗೆ ಮೂಹುರ್ತವನ್ನು ಫಿಕ್ಸ್ ಮಾಡಿದ್ದಾರೆ. ಸಿಎಂ ಯಾವಾಗ ರಾಜೀನಾಮೆ ನೀಡ್ತಾರೆ ಎಂದು ಹೇಳಬೇಕು. ಆದರೆ ಬಿಜೆಪಿ ರಾಜ್ಯಾಧ್ಯಕ್ಷನಾಗಿ ನಾನು ಹೇಳುತ್ತಿದ್ದೇನೆಂದು ವಿಜಯೇಂದ್ರ ಮಾತನಾಡಿದ್ದಾರೆ.