ರಾಯಚೂರು: ‘ಒಳ ಮೀಸಲಾತಿ ವಿಷಯದ ಬಗ್ಗೆ ನಾವೊಬ್ಬರೇ ನಿರ್ಧಾರವನ್ನು ತೆಗೆದುಕೊಳ್ಳಲಾಗುವುದಿಲ್ಲ. ಒಳಮೀಸಲಾತಿಯ ವಿಷಯವೂ ಇಡೀ ರಾಜ್ಯಕ್ಕೆ ಸಂಬಂಧಪಟ್ಟಿರುವುದರಿಂದ ನಮ್ಮ ಪಕ್ಷದ ಹೈಕಮಾಂಡ್ ಜೊತೆ ಚರ್ಚೆಮಾಡಿದ ಬಳಿಕ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ’ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ನಗರದಲ್ಲಿಂದು ಮಾತನಾಡಿದ ಅವರು, ಕಾಂತರಾಜುರವರ ಆಯೋಗದ ವರದಿಯನ್ನು ಈಗಾಗಲೇ ಸ್ವೀಕರಿಸಲಾಗಿದ್ದು, ಈ ವಿಷಯದ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ತೀರ್ಮಾನವನ್ನು ಕೈಗೊಳ್ಳಲಾಗುತ್ತದೆ. ಈ ವರದಿಯಲ್ಲಿಏನಾದರೂ ಲೋಪ -ದೋಷಗಳಿದ್ದರೆ ಅದನ್ನು ಸರಿಪಡಿಸಿ ಪರಿಶೀಲನೆ ಮಾಡಲಾಗುತ್ತದೆ ಎಂದಿದ್ದಾರೆ.
ಹೈಕಮಾಂಡ್ ವರಿಷ್ಟರ ಜೊತೆಗೆ ಚರ್ಚೆ ನಡೆಸಿ ನಿರ್ಧಾರವನ್ನು ಕೈಗೊಳ್ಳಲಾತ್ತದೆ.ಸತೀಶ್ ಜಾರಕಿಹೊಳಿಯವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರನ್ನು ಭೇಟಿಯಾಗಿರುವುದಕ್ಕೆ ಬೇರೆ ಬಣ್ಣ ಹಚ್ಚುವ ಅವಶ್ಯಕತೆಯಿಲ್ಲವೆಂದಿದ್ದಾರೆ.