ದಾವಣಗೆರೆ: ಮುಂಬರುವ ವಿಧಾನಸಭೆ ಅಧಿವೇಶನ ಶುರುವಾಗುವ ಮುನ್ನವೇ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡ್ತಾರೆ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್ .ಅಶೋಕ್ ಸ್ಪೋಟಕ ಹೇಳಿಕೆಯನ್ನು ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಪತನವಾಗುತ್ತದೆ.ಹೆಚ್ಚು ದಿನ ಉಳಿಯುವುದಿಲ್ಲ ಎನ್ನುವ ಗ್ಯಾರಂಟಿ ಸಿಎಂ ಸಿದ್ದರಾಮಯ್ಯನವರಿಗಿದೆ.ಆದ್ದರಿಂದ ಮುಂದಿನ ಅಧಿವೇಶನದ ಮುನ್ನ ರಾಜೀನಾಮೆ ನೀಡುತ್ತಾರೆ ಎಂಬ ಹೇಳಿಕೆಯನ್ನು ನೀಡಿದ್ದಾರೆ.
ರಾಜ್ಯ ಸರ್ಕಾರ ತಮ್ಮ ಅಧಿಕಾರ ಪ್ರಾರಂಭವಾಗಿ 16 ತಿಂಗಳಲ್ಲಿ ವಾಲ್ಮೀಕಿ ಅಭಿವೃದ್ದಿ ನಿಗಮದ ಹಗರಣ, ಮುಡಾ ಸೈಟ್ ಹಗರಣ, ಕಾರ್ಮಿಕ ಇಲಾಖೆ ಮತ್ತು ಮಧ್ಯ (ಲಿಕ್ಕರ್) ಸೇರಿದಂತೆ 16 ತಿಂಗಳಲ್ಲಿ 16 ಅವಾಂತರಗಳನ್ನು ಮಾಡಿಕೊಂಡು ಬ್ರಹ್ಮಾಂಡ ಭ್ರಷ್ಟಾಚಾರದಲ್ಲಿ ಮುಳುಗಿಹೋಗಿದೆ.ಮುಂಬರುವ ಅಧಿವೇಶನದಲ್ಲಿ ರಾಜ್ಯ ಸರ್ಕಾರದ ಎಲ್ಲಾ ಹಗರನಗಳನ್ನು ಬಯಲಿಗೆಳೆಯುತ್ತೇವೆ ಎಂದು ಹೇಳಿದ್ದಾರೆ.