ಬಂಟ್ವಾಳ: ಭ್ರಷ್ಟ ಸರ್ಕಾರವನ್ನು ವಜಾ ಮಾಡಲು ರಾಷ್ಟ್ರಪತಿಗಳಿಗೆ ಮನವಿಯನ್ನು ಸಲ್ಲಿಸಲಿರುವ ಬಿವೈ ವಿಜಯೇಂದ್ರ, ಅಹಿಂದ ಹೆಸರನ್ನು ಹೇಳಿಕೊಂಡು ಜನರಿಗೆ ದ್ರೋಹ ಮಾಡುತ್ತಿರುವ ಸಿಎಂ ಸಿದ್ದರಾಮಯ್ಯನವರ ವಿರುದ್ದ ವಾಗ್ದಾಳಿ ನಡೆಸಿರುವುದು ತಿಳಿದುಬಂದಿದೆ.
ಬಂಟ್ವಾಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದುಳಿದ ವರ್ಗಗಳಿಗೆ ಮೀಸಲಿರುವ ಹಣವನ್ನುಸಿಎಂ ಸಿದ್ದರಾಮಯ್ಯನವರು ಆಡಳಿತದಲ್ಲಿರುವ ಸರ್ಕಾರದವರು ದೋಚಿ, ಜನರಿಗೆ ಅನ್ಯಾಯವನ್ನು ಮಾಡುತ್ತಿದ್ದು, ಜನರ ಹಣವನ್ನು ಚುನಾವಣೆಗೆ ಬಳಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅಹಿಂದಾ ಎಂಬ ಹೆಸರನ್ನು ಹೇಳಿಕೊಂಡು ಅಧಿಕಾರಕ್ಕೆ ಬಂದು ಈ ರೀತಿಯ ದ್ರೋಹ ಮಾಡುವುದು ಎಷ್ಟು ಸರಿ?, ಈ ಭ್ರಷ್ಟ ಸರ್ಕಾರವನ್ನು ವಜಾ ಮಾಡಲು ರಾಷ್ಟ್ರಪತಿಯವರಿಗೆ ಮನವಿಯನ್ನು ಮಾಡುತ್ತೇವೆ ಎಂದಿದ್ದಾರೆ.
ರಾಜ್ಯ ಸರ್ಕಾರವೂ ಅಧಿಕಾರಕ್ಕೆ ಬಂದಾಗಿನಿಂದ ಒಂದೂ ಅಭಿವೃದ್ದಿಯ ಕೆಲಸಗಳು ಆಗಿಲ್ಲವೆಂದು ಎಂದು ಅಸಮಧಾನ ಹೊರಹಾಕಿದ್ದಾರೆ.