ಬೆಂಗಳೂರು: ಮಾದಕ ವಸ್ತುಗಳ ನಿಯಂತ್ರಣಕ್ಕೆ ಕಾನೂನು ತಿದ್ದಪಡಿ ತರಲು ಚಿಂತನೆ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ.
ಮಾದಕ ವಸ್ತುಗಳ ಪರಿಣಾಮಕಾರಿ ನಿಯಂತ್ರಣಕ್ಕಾಗಿ ಕಾನೂನಿಗೆ ತಿದ್ದಪಡಿ ತರಲು ಸರ್ಕಾರ ಚಿಂತನೆ ನಡೆಸಿದೆ. ಬೆಂಗಳೂರು, ಮಂಗಳೂರು, ಮೈಸೂರು, ಹುಬ್ಬಳ್ಳಿ, ಧಾರಾವಾಡದಲ್ಲಿ ಮಾದಕ ವಸ್ತುಗಳ ಮಾರಾಟ, ಸೇವನೆ ಹಾವಳಿ ಹೆಚ್ಚಾಗಿದೆ. ನಿಯಂತ್ರಣಕ್ಕೆ ಈಗಾಗಲೇ ಗೃಹ ಸಚಿವರ ಅಧ್ಯಕ್ಷತೆಯಲ್ಲಿ ಟಾಸ್ಕ್‌ಪೋರ್ಸ್ ರಚಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯನವರು ಹೇಳಿದ್ದಾರೆ.