ಕಾಂಗ್ರೆಸ್‌ ,ಬಿಜೆಪಿ ಮತ್ತು ಜನತಾದಳದ ನಡುವೆ ಸೋಷಿಯಲ್‌ ಮೀಡಿಯಾಗಳಲ್ಲಿ ಟ್ವೀಟ್‌ ಮಾಡುವುದರ ಮೂಲಕ ಎಟು-ತಿರುಗೇಟುಗಳನ್ನು ಕೊಟ್ಟುಕೊಳ್ಳುತ್ತಿರುತ್ತಾರೆ.

ಕಾಂಗ್ರೆಸ್‌ ಪಕ್ಷದ ಟ್ವೀಟ್‌ ಹೀಗಿದೆ:

ʼಅಟಕಟಾ.. ನಿಮ್ಮದು ಸೆಕ್ಯೂರ್ಡ್ ʻಬ್ಲೂ ಬಾಯ್ಸ್ʼ ಪಾರ್ಟಿ ಅನ್ನೋದು ಮರೆತು ಹೋಯ್ತೆ..?! ಅದೂ ಇಷ್ಟು ಬೇಗ..? ಶಾಂತಂ ಪಾಪಂ ಎಂದು ಕಾಂಗ್ರೆಸ್ ಲೇವಡಿ ಮಾಡಿದೆ.

ನಿಮ್ಮಲ್ಲಿ ʻಬ್ಲೂ ಫಿಲಂʼ ನಿರ್ಮಾಪಕರು, ನಿರ್ದೇಶಕರು, ಎಲ್ಲಕ್ಕಿಂತ ಮಿಗಿಲಾಗಿ ಪಾತ್ರಧಾರಿಗಳು ತುಂಬಿ ತುಳುಕುತಿದ್ದಾರೆ. ನಿಮ್ಮ ಹುಡುಗ ನಿರ್ಮಿಸಿ, ನಟಿಸಿದ ‘ಹಾಸನ್ ಬ್ಲೂ’ (Hassan Blue) ಚಿತ್ರ ವರ್ಲ್ಡ್ ಫೇಮಸ್! ಕರ್ನಾಟಕದ ಕೀರ್ತಿ ಪತಾಕೆಯನ್ನ ಹಾಲಿವುಡ್ ವರೆಗೂ ಹಾರಾಡಿಸಿದೆ. ಅವರು ಈಗಲೂ ಜೈಲಲ್ಲಿ ʻನೀಲ ಮೇಘ ಶ್ಯಾಮ..ʼ ಹಾಡುತ್ತಿದ್ದಾರೆ. ನಿಮ್ಮ ಇನ್ನೊಬ್ಬ ಲಿಂಬಿಯ ಬನದ ನಾಯಕರು ʻಲಿಂಬೆ ಹಣ್ಣಿನಂತ…ʼ ಹಾಡು ಹೇಳಲು ಹೋಗಿ ಜೈಲಲ್ಲಿ ಮುದ್ದೆ ಮುರಿದು ಬಂದಿದ್ದಾರೆ. ಇನ್ನೊಬ್ಬ ʻರಾಧಾ ಮಾಧವ ಮನೋ ವಿಲಾಸ..ʼ ನಾಯಕರು ಜಸ್ಟ್ ಎಸ್ಕೇಪ್ ಆಗಿದ್ದಾರೆ. ನಿಮ್ಮ ನಾಯಕರೇ ನಿರ್ಮಿಸಿ, ನಿರ್ದೇಶಿಸಿ, ನಟಿಸಿ ಸಿನಿಮಾ ತೆಗೆದು ಜಗತ್ತಿಗೆ ತೋರಿಸಿರುವಾಗ ಬೇರೆಯವರಿಗೆ ಟೆಂಟಲ್ಲಿ ತೋರಿಸುವ ಅವಕಾಶವೆಲ್ಲಿದೇ? ನಿಜಕ್ಕೂ ನಿಮ್ಮ ಸಿನಿಮಾ ಚೆನ್ನಾಗಿದೆ. ಅದರ ಮೇಲೆ ಮತ್ತೊಂದು ಕತೆ ಕಟ್ಟಲು ಹೋಗಬೇಡಿ. ಸುಮ್ಮನೇ ಆಕಾಶಕ್ಕೆ ಉಗುಳಿ ಮುಖಕ್ಕೆ ಸಿಂಪಡಿಸಿಕೊಳ್ಳಬೇಡಿ ಅಂತ ಲೇವಡಿ ಮಾಡಿದೆ. 

Leave a Reply

Your email address will not be published. Required fields are marked *