ರಾಮನಗರ: ಸದ್ಯ ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರವೂ ʼವಾಮಮಾರ್ಗದಲ್ಲಿ ಉಪ ಚುನಾವಣೆ ಗೆಲ್ಲಲು ಸಂಚು ರೂಪಿಸಿದೆʼ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ನೇರವಾಗಿ ಕಾಂಗ್ರೆಸ್ಸಿಗರ ಮೇಲೆ ಆರೋಪ ಮಾಡಿದ್ದಾರೆ.
ಚನ್ನಪಟ್ಟಣ ವಿಧಾನಸಭೆ ಕ್ಷೇತ್ರ, ತಿಟ್ಟಮಾರನಹಳ್ಳಿ, ಕುಂತೂರು ದೊಡ್ಡಿ, ಚಿಕ್ಕನದೊಡ್ಡಿ, ಪಟಲು, ಕಳ್ಳಿ ಹೊಸೂರು, ಮೈಲನಾಯಕನಹಳ್ಳಿ ಮತ್ತು ಇನ್ನಿತರೆ ಗ್ರಾಮಗಳಲ್ಲಿ ಚುನಾವಣಾ ಪ್ರಚಾರ ಮಾಡುವ ವೇಳೆ ಪಕ್ಷದ ಕುರಿತು ಮಾತನಾಡಿದ್ದಾರೆ.
ಎಲೆಕ್ಷನ್‌ನಲ್ಲಿ ರಾಮನಗರವನ್ನು ಸೇರಿದಂತೆ ವಿವಿಧ ವಿಧಾನಸಭೆ ಕ್ಷೇತ್ರಗಳಲ್ಲಿಯೂ ಕೂಡಾ ಕಾಂಗ್ರೆಸ್ ಸರ್ಕಾರ ಗಿಫ್ಟ್ ಕೂಪನ್ಗಳನ್ನು ಹಂಚುವ ಬಗ್ಗೆ ಸಭೆ ನಡೆಸಿದ್ದರು. ಉಪ ಚುನಾವಣೆಯಲ್ಲಿ ಜನರಿಗೆ ವಿವಿಧ ರೀತಿಯಲ್ಲಿ ಅಮಿಷವೊಡ್ಡಿ ಮತಗಳನ್ನು ಸೆಳೆಯುವ ತಂತ್ರವನ್ನು ಮಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಯವರು ಆರೋಪಿಸಿದ್ದಾರೆ.