ಬೆಂಗಳೂರು: ಕೋವಿಡ್‌ ಸಂದರ್ಭದಲ್ಲಿ ದೊಡ್ಡಹಗರಣ ನಡೆದಿದದೆ.ಜನರ ಸಾವು-ಬದುಕಿನ ಸಂದರ್ಭದಲ್ಲೂ ಬಿಜೆಪಿ ಕೊಳ್ಳೆ ಹೊಡೆದಿದೆ ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್‌ ಆರೋಪ ಮಾಡಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಕೊರೋನ ಸಂದರ್ಭದಲ್ಲಿ ನ್ಯಾಯಯುತವಾಗಿ , ಮಾನವೀಯ ಸೃಷ್ಟಿಯಿಂದ ಕೆಲಸವನ್ನು ಮಾಡಬೇಕಿತ್ತು ಆದರೆ ಸಾವಿರಾರು ಕೋಟಿ ಲೂಟಿ ಹೊಡೆದಿದ್ದಾರೆ ಎಂದು ಗಂಭೀರವಾಗಿ ಆರೋಪಿಸಿದ್ದಾರೆ ಎಂ.ಬಿ.ಪಾಟೀಲ್.‌

ಬಿಜೆಪಿ ಅಧಿಕಾರದ ಅವಧಿಯಲ್ಲಿ ಕಳಪೆ ಗುಣಮಟ್ಟದ ವೈದ್ಯಕೀಯ ಉಪಕರಣಗಳನ್ನು ಬಳಕೆ ಮಾಡಿ ನಾವು ಗುಣಮಟ್ಟದ ಚಿಕಿತ್ಸೆಯನ್ನು ಕೊಟ್ಟಿದ್ದೇವೆ ಎಂದು ಸತ್ಯಕ್ಕೆ ದೂರವಿರುವ ಮಾತನ್ನು ಹೇಳಿಕೊಂಡೇ ಬಂದಿದ್ದಾರೆ ಎಂದು ಕಿಡಿಕಾರಿದ್ದಾರೆ.

Leave a Reply

Your email address will not be published. Required fields are marked *