ಚನ್ನಪಟ್ಟಣ: ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸಿಪಿ ಯೋಗೇಶ್ವರ್ ವಿರುದ್ದವಾಗಿ ಜೆಡಿಎಸ್ ನಾಯಕರಾದ ಹೆಚ್.ಡಿ.ಕುಮಾರಸ್ವಾಮಿ, ಮತ್ತು ಅವರ ಕುಟುಂಬದವರು ಯಾರೇ ಸ್ಪರ್ಧಿಸಿದರೂ ಸೋಲುವುದು ಖಚಿತವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಸಿಪಿ ಯೋಗೇಶ್ವರ್ ನಾಮಪತ್ರವನ್ನು ಸಲ್ಲಿಸುವ ಮುನ್ನ ನಡೆದ ರೋಡ್ ಶೋನಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಈ ಕ್ಷೇತ್ರದಿಂದ ಎರಡೆರಡು ಸಲ ಮುಖ್ಯಮಂತ್ರಿಯಾದ್ರೂ ಕುಮಾರಸ್ವಾಮಿ ಯಾವುದೇ ಅಭಿವೃದ್ದಿ ಕೆಲಸಗಳನ್ನು ಮಾಡಿಲ್ಲ.ಎಲ್ಲಾ ಕ್ಷೇತ್ರಗಳನ್ನು ಬಿಟ್ಟು ಮಂಡ್ಯವನ್ನು ಹಿಡಿದುಕೊಂಡಿದ್ದಾರೆ.ಈ ಕ್ಷೇತ್ರದಲ್ಲಿ ಕೆರೆಗಳು ತುಂಬಿರುವುದಕ್ಕೆ ಸಿಪಿ ಯೋಗೇಶ್ವರ್‌ವರು ಕಾರಣ. ಅಭಿವೃದ್ದಿ ಪರ ಕಾರ್ಯಗಳನ್ನು ಮಾಡುವ ಅಭ್ಯರ್ಥಿಯನ್ನು ಹೆಚ್ಚು ಮತಗಳಿಂದ ಗೆಲ್ಲಿಸಬೇಕೆಂದು ಹೇಳಿದ್ದಾರೆ.