ಬೆಂಗಳೂರು: ಕೇಂದ್ರ ಬಿಜೆಪಿ ಸರ್ಕಾರ ಕನ್ನಡಿಗರ ವಿರುದ್ಧ ಮತ್ಸರ ಕಾರುತ್ತಿರುವುದಕ್ಕೆ ಇದಕ್ಕಿಂತ ಬೇರೆ ಸಾಕ್ಷಿ ಬೇಕೇ?  ಎಂದು ಕರ್ನಾಟಕ ಕಾಂಗ್ರೆಸ್‌ ಸರ್ಕಾರ ಟ್ವೀಟ್‌ ಮೂಲಕ ವಾಗ್ದಾಳಿ ನಡೆಸಿದೆ.

15ನೇ ಹಣಕಾಸು ಆಯೋಗದಲ್ಲಿ ಕರ್ನಾಟಕಕ್ಕೆ ತೆರಿಗೆ ಪಾಲು ಕಡಿಮೆ ಮಾಡಿದ ಕಾರಣಕ್ಕೆ ಆಯೋಗವು 11,495 ಕೋಟಿ ರೂ.ನಷ್ಟು ಹೆಚ್ಚುವರಿ ಅನುದಾನ (5,495 ಕೋಟಿ ವಿಶೇಷ ಅನುದಾನ, ಬೆಂಗಳೂರು ಪೆರಿಫೆರಲ್ ರಿಂಗ್ ರಸ್ತೆಗೆ 3,000 ಕೋಟಿ) ನೀಡಲು ಶಿಫಾರಸ್ಸು ನೀಡಿತ್ತು. ಆದರೆ ಬಿಜೆಪಿ ಸರ್ಕಾರ ಇದನ್ನು ಕೊಡದೇ ದ್ರೋಹ ಬಗೆದಿದೆ.

ಬಿಜೆಪಿಯ ಅನ್ಯಾಯ ಇಷ್ಟಕ್ಕೇ ನಿಲ್ಲಲಿಲ್ಲ. ಕೇಂದ್ರ ಸರ್ಕಾರದ ಯೋಜನೆಗಳಲ್ಲಿ ಕರ್ನಾಟಕದ ಪಾಲು 50%ಗಿಂತ ಹೆಚ್ಚಾಗಿದೆ. ಕೇಂದ್ರದ ಯೋಜನೆಗಳಿಗೆ ಕೇಂದ್ರ ಸರ್ಕಾರ ಅನುದಾನ ನೀಡದ ಕಾರಣ ಕರ್ನಾಟಕಕ್ಕೆ 23,402 ಕೋಟಿ ಹೆಚ್ಚಿನ ಹೊರೆ ಬಿದ್ದಿದೆ.

ಜಲಜೀವನ್ ಮಿಷನ್ ಯೋಜನೆಯಲ್ಲಿ 13 ಸಾವಿರ ಕೋಟಿ ರೂ. ಬಾಕಿ ಉಳಿಸಿಕೊಂಡಿರುವ ಕೇಂದ್ರ ಸರ್ಕಾರ, ಗ್ರಾಮೀಣ ಮತ್ತು ನಗರ ಸ್ಥಳೀಯ ಸಂಸ್ಥೆಗಳಿಗೆ 1,802 ಕೋಟಿ ರೂ. ಹಾಗೂ ಆರೋಗ್ಯ ಕ್ಷೇತ್ರದಲ್ಲಿ 874 ಕೋಟಿ ರೂ. ಅನುದಾನ ಕಡಿಮೆಯಾಗಿದೆ. ಇನ್ನು ಭದ್ರ ಮೇಲ್ದಂಡೆ ಯೋಜನೆಗೆ ಬಜೆಟ್ ನಲ್ಲಿ ಘೋಷಿಸಿದ 5,300 ಕೋಟಿ ರೂ. ಅನುದಾನವೂ ಬಂದಿಲ್ಲ.

ಇಷ್ಟೆಲ್ಲಾ ಅನ್ಯಾಯವಾಗುತ್ತಿದ್ದರೂ  ಕರ್ನಾಟಕ ರಾಜ್ಯದ ಬಿಜೆಪಿ ನಾಯಕರು ಬಾಯಿ ಬಿಡದೆ, ತಮ್ಮ ಹೇಡಿತನದ ಪ್ರಮಾವಧಿಯನ್ನು ಪ್ರದರ್ಶಿಸುತ್ತಿದ್ದಾರೆ.

Leave a Reply

Your email address will not be published. Required fields are marked *