ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಮತ್ತು ಇತರರ ದೋಷಾರೋಪ ಸಲ್ಲಿಸಲು ಕೋರ್ಟ್ ದಿನಾಂಕವನ್ನು ನಿಗದಿ ಮಾಡಿದೆ ಎಂದು ತಿಳಿದುಬಂದಿದೆ.
ರೇಣುಕಾಸ್ವಾಮಿ ಕೊಲೆ ಕೇಸಿನಲ್ಲಿ ಪರಪ್ಪನ ಅಗ್ರಹಾರ ಸೇರಿದ ದರ್ಶನ್ ಮತ್ತು ಇತರ ಆರೋಪಿಗಳ ಬಗ್ಗೆ ತನಿಖೆ ಪೂರ್ಣಗೊಳಿಸಿರುವ ಪೊಲೀಸರು ಚಾರ್ಜ್‌ಶೀಟನ್ನು ರೆಡಿ ಮಾಡಿದ್ದಾರೆ.ಈ ವಿಚಾರದ ವಿಚಾರಣೆ ನಡೆಸಿದ 57ನೇ ಸಿಸಿಹೆಚ್ ನ್ಯಾಯಲಯವು ದೋಷಾರೋಪ ಪಟ್ಟಿಯನ್ನು ಸಲ್ಲಿಸಲು ಡೆಟ್ ಫಿಕ್ಸ್ ಮಾಡಿದೆ ಎನ್ನಲಾಗಿದೆ.
ರೇಣುಕಾಸ್ವಾಮಿ ಹತ್ಯೆ ಪ್ರಕರಣದ ವಿಚಾರಣೆಯನ್ನು ನ.3ಕ್ಕೆ ಮುಂದೂಡಿ ಆದೇಶವನ್ನು ಹೊರಡಿಸಿದೆ ಎನ್ನಲಾಗಿದೆ.ಇದೇ ವೇಳೆ ದರ್ಶನ್ ಪವಿತ್ರಾಗೌಡ ವಿಡಿಯೋ ಕಾನ್ಫರೆನ್ಸ್‌ನಲ್ಲಿ ಹಾಜರಾಗಿದ್ದರು.
