ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರೇಣುಕಾಸ್ವಾಮಿ ತಂದೆ ಮತ್ತು ತಾಯಿಗೆ ಸಮನ್ಸ್ ಜಾರಿ ಮಾಡಿದೆ ಎಂದು ತಿಳಿದುಬಂದಿದೆ.

ರೇಣುಕಾಸ್ವಾಮಿ ತಂದೆ ತಾಯಿ ನ್ಯಾಯಾಲಯಕ್ಕೆ ಹಾಜರಾಗುವಂತೆ ಸಮನ್ಸ್ ನೀಡಿದೆ. ಡಿಸೆಂಬರ್ 17 ರಂದು ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯದಲ್ಲಿ ಸಾಕ್ಷಿ ಹೇಳಲು ಹಾಜರಾಗುವಂತೆ ಸಮನ್ಸ್ ಜಾರಿಯಾಗಿದೆ. ದರ್ಶನ್ ಇರುವ ಬ್ಯಾರಾಕಿನಲ್ಲಿ ಟಿವಿ ಅಳವಡಿಸಲು ಸೂಚನೆಯನ್ನು ನೀಡಿದೆ. ಈ ಕೇಸಿನ ವಿಚಾರವಾಗಿ ಯಾವ ಸಾಕ್ಷಿಯನ್ನು ಯಾವ ಸಂದರ್ಭದಲ್ಲಿ ಹಾಜರುಪಡಿಸಲು ಪ್ರಾಸಿಕ್ಯೂಷನ್ ಆಯ್ಕೆ ಮಾಡಲಿದೆ ಎನ್ನಲಾಗಿದೆ.
