ಬೆಂಗಳೂರು: ನಟ ದರ್ಶನ್ ಕೊಲೆ ಪ್ರಕರಣದ ಸುದ್ದಿಗಳನ್ನು ಪ್ರಸಾರ ಮಾಡದಂತೆ ಹೈಕೋರ್ಟ್ ಆದೇಶವನ್ನು ಹೊರಡಿಸಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ಚಾರ್ಜ್‌ಶೀಟ್ ವಿವರಗಳನ್ನು ಸುದ್ದಿ ಮಾಧ್ಯಮಗಳಲ್ಲಿ ಪ್ರಸಾರ ಮಾಡದಂತೆ ನಿರ್ಬಂಧ ಹೇರಲು ರಿಟ್ ಅರ್ಜಿಯನ್ನು ಹೈಕೋರ್ಟ್‌ಗೆ ಸಲ್ಲಿಸಲಾಗಿತ್ತು.ದರ್ಶನ್ ಪರ ವಕೀಲರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನಡೆಸಿದ ಹೈಕೋರ್ಟ್ ಪೊಲೀಸ್ ನೀಡಿರುವ ಆರೋಪದ ವರದಿಯ ವಿವರಗಳನ್ನು ಮಾಧ್ಯಮಗಳಲ್ಲಿ ಪ್ರಸಾರ ಮಾಡುವಂತಿಲ್ಲ, ಒಂದು ವೇಳೆ ಕೋರ್ಟ್ ಆದೇಶವನ್ನು ಮೀರಿದರೆ ಅಂತಹ ಮಾಧ್ಯಮಗಳ ವಿರುದ್ದ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸೂಚಿಸಿದೆ