ದೀಪಾವಳಿ ಹಬ್ಬವೆಂದರೆ ಪಟಾಕಿ ಇದ್ದೇಯಿರುತ್ತದೆ. ಆದರೆ ದೀಪಾವಳಿ ಹಬ್ಬದ ಅಚರಣೆಯ ವೇಳೆಯಲ್ಲಿ ಪಟಾಕಿ ಮಳಿಗೆಗಳಿಗೆ ಹಸಿರು ಪಟಾಕಿಗಳನ್ನು ಮಾತ್ರ ಮಾರಾಟ ಮಾಡುವ ಹಾಗೆ ಅನುಮತಿಯನ್ನುನೀಡಿ ಮಳಿಗೆ ಮಾಲೀಕರಿಂದ ಮುಚ್ಚಳಿಕೆಯನ್ನು ಬರೆಸಿಕೊಳ್ಳಲು ಜಿಲ್ಲಾಧಿಕಾರಿಗಳಿಗೆ ಸೂಚನೆಯನ್ನು ನೀಡಿರುವ ಪರಿಸರ ಮತ್ತು ಅರಣ್ಯ ಸಚಿವ ಈಶ್ವರ್ ಖಂಡ್ರೆ.
ಈ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಅವರು, ನಿಯಮವನ್ನು ಉಲ್ಲಂಘನೆ ಮಾಡಿದರೆ ಪಟಾಕಿ ಮಳಿಗೆಯ ಅನುಮತಿಯನ್ನು ರದ್ದುಮಾಡಲಾಗುತ್ತದೆ.ಪಟಾಕಿ ಮಾರಾಟ ಮಾಡಲು ಅನುಮತಿಯನ್ನು ನೀಡಲಾಗುವುದಿಲ್ಲವೆಂದು ತಿಳಿಸಿದ ಅವರು, ಜಿಲ್ಲಾಡಳಿತ ಈ ವಿಷಯದ ಬಗ್ಗೆ ಹೆಚ್ಚು ಗಮನವಹಿಸಿ ಕ್ರಮವನ್ನು ಕೈಗೊಳ್ಳಬೇಕು ಎಂದು ಹೇಳಿದ್ದಾರೆ.
ಹಿರಿಯರು, ಮಕ್ಕಳ ಆರೋಗ್ಯದ ದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಮಾಯು ಮಾಲಿನ್ಯ, ಶಬ್ದ ಮಾಲಿನ್ಯವನ್ನು ತಡೆಗಟ್ಟಲು ಹೆಚ್ಚು ಸೌಂಡ್ ಬರುವ ಪಟಾಕಿಗಳನ್ನು ಹೊಡೆಯುವುದನ್ನು ನಿಲ್ಲಿಸಿ ಇಲ್ಲವಾದರೆ ಹಸಿರು ಪಟಾಕಿಗಳನ್ನು ಮಾತ್ರ ಬಳಸಿ ಎಂದು ಸಚಿವ ಈಶ್ವರ ಖಂಡ್ರೆ ಜನರಲ್ಲಿ ಮನವಿಯನ್ನು ಮಾಡಿದ್ದಾರೆ.