ಬೆಂಗಳೂರು: ದೀಪಾವಳಿ ಹಬ್ಬದಂದು ಪಟಾಕಿಗಳನ್ನು ಸಿಡಿಸಿ ಹಬ್ಬ ಮಾಡುವುದು ಹಿಂದಿನಿಂದಲೂ ನಡೆದುಕೊಂಡು ಬಂದಿರುವಂತದ್ದು, ಆದರೆ ಈ ಬಾರೀ ಹಸಿರು ಪಟಾಕಿಗೆ ಮಾತ್ರ ಅವಕಾಶವನ್ನು ನೀಡಬೇಕೆಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದು, ಪಟಾಕಿಯಿಂದಾಗುವ ಸಮಸ್ಯೆಗಳನ್ನು ತಡೆಯಲ್ಲಿಕ್ಕಾಗಿ ಕ್ರಮವನ್ನು ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್‌ ವರಿಷ್ಟಾಧಿಕಾರಿಗಳಿಗೆ ಸಿಎಂ ಸೂಚನೆಯನ್ನು ನೀಡಿದ್ದಾರೆ.

ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್‌ ವರಿಷ್ಟಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯಿತಿಯ ಸಿಇಒಗಳ ಜೊತೆಗೆ ಗೃಹಕಚೇರಿ ಕೃಷ್ಣಾದಲ್ಲಿ ಸಭೆಯನ್ನು ನಡೆಸಿದ್ದಾರೆ.

ಪರಿಸರಕ್ಕೆ ಹಾನಿಮಾಡುವಂತಹ ಪಟಾಕಿಗಳಿಗೆ ಅವಕಾಶವನ್ನು ನೀಡಬಾರದು. ಪಟಾಕಿಗಳ ದಾಸ್ತಾನು, ಮಾರಾಟ ಪ್ರಕ್ರಿಯೆಯಲ್ಲಿ ಯಾವ ರೀತಿಯ ಲೋಪವಾಗಬಾರದು.ಎಂದು ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್‌ ವರಿಷ್ಟಾಧಿಕಾರಿಗಳಿಗೆ ಸೂಚನೆಯನ್ನು ನೀಡಿದ್ದಾರೆ.

ದೀಪಾವಳಿ ಹಬ್ಬ ಆಚರಿಸುವಾಗ ಹಸಿರು ಪಟಾಕಿಗೆ ಮಾತ್ರ ಅವಕಾಶವಿರುತ್ತದೆ.ಅದೂ ರಾತ್ರಿ 8 ಗಂಟೆಯಿಂದ 10 ಗಂಟೆಯ ಒಳಗಡೆ ಪಟಾಕಿಯನ್ನುಸಿಡಿಸಬೇಕು. ಹಸಿರು ಪಟಾಕಿಯನ್ನು ಬಿಟ್ಟು ಬೇರೆ ರೀತಿಯ ಪಟಾಕಿಗಳನ್ನು ಮಾರಾಟ ಮಾಡಿದ್ರೆ , ನಿಯಮವನ್ನು ಯಾರಾದ್ರೂ ಉಲ್ಲಂಘನೆ ಮಾಡಿದ್ರೆ  ಕ್ರಿಮಿನಲ್‌ ಪ್ರಕರಣವನ್ನ ದಾಖಲಿಸಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ  ತಿಳಿಸಿದ್ದಾರೆ.

Leave a Reply

Your email address will not be published. Required fields are marked *