ಹೊಸದಿಲ್ಲಿ: ಕೇಜ್ರಿವಾಲ್ ನಂತರ ಯಾರಾಗ್ತಾರೆ ಸಿಎಂ ಎನ್ನುವ ವಿಚಾರಕ್ಕೆ ಇಂದು ತೆರೆ ಬಿದ್ದಿದೆ. ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಎಎಪಿ ಪಕ್ಷದ ಶಾಸಕಿ, ಸಚಿವೆ ಅತಿಶಿ ಮರ್ಲೆನಾ ಅವರನ್ನುಇಂದು ನಡೆದ ಶಾಸಕಾಂಗ ಸಭೆಯಲ್ಲಿ ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಇಂದು ಸಂಜೆ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರನ್ನು ಭೇಟಿಯಾಗಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆಯನ್ನು ನೀಡಲಿದ್ದಾರೆ ಎಂದು ಎಎಪಿ ಮೂಲಗಳು ತಿಳಿಸಿವೆ ಎನ್ನಲಾಗಿದೆ.