ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡಿರುವುದನ್ನು ಖಂಡಿಸಿ ಬಿಜೆಪಿ ಹೋರಾಟ ಮಾಡಲು ಸಿದ್ದತೆಯನ್ನು ನಡೆಸುತ್ತಿದೆ ಎಂದು ತಿಳಿದುಬಂದಿದೆ.
ಬಿಜೆಪಿ ಶಾಸಕ ಎಸ್.ವಿಶ್ವನಾಥ್ ಸಮ್ಮುಖದಲ್ಲಿ ಬೆಂಗಳೂರಿನಿಂದ ಧರ್ಮಸ್ಥಳದವರೆಗೂ ಯಾತ್ರೆಯನ್ನು ನಡೆಸಲಾಗುತ್ತದೆ ಎಂದು ಬಿವೈ ವಿಜಯೇಂದ್ರ ತಿಳಿಸಿದ್ದಾರೆ.
ʼಧರ್ಮದ ಉಳಿವಿಗಾಗಿಧರ್ಮಯುದ್ದʼ ಎಂಬ ಯಾತ್ರೆಯ ಅಭಿಯಾನವನ್ನು ಪ್ರಾರಂಭಿಸಲಾಗುತ್ತದೆ. ಎಲ್ಲಾ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗಳಲ್ಲಿ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ ಎಂದು ವಿಜಯೇಂದ್ರ ತಿಳಿಸಿದ್ದಾರೆ.
