ಬೆಂಗಳೂರು: ವಿಮಾನ ದುರಂತದಲ್ಲಿ ಮೃತಪಟ್ಟ ಮಹಾರಾಷ್ಟ್ರ ಸಿಎಂ ಅಜಿತ್‌ ಪವಾರ್‌ ಆಕಾಲಿಕ ನಿಧನಕ್ಕೆ ಕರ್ನಾಟಕ ಉಪಮುಖ್ಯಮಂತ್ರಿ ಡಿಸಿಎಂ ಡಿಕೆ ಶಿವಕುಮಾರ್ ತೀವ್ರ ಸಂತಾಪವನ್ನು ಸೂಚಿಸಿದ್ದಾರೆ.ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ  ಸಾವಿನ ವಿಚಾರವು ನಮ್ಮೆಲ್ಲರಿಗೂ ಆಘಾತವನ್ನುಂಟು ಮಾಡಿದೆ. ಅವರ ಸಾವಿನ ಸುದ್ದಿ ತಿಳಿದ ಕೂಡಲೇ ನನಗೂ ಗಾಬರಿಯಾಯಿತು ಎಂದು ಹೇಳಿದ್ದಾರೆ.

ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ, ಅಜಿತ್‌ ಪವಾರ್‌ರವರು ಅತ್ಯಂತ ಪ್ರಗತಿಪರ ಆಲೋಚನೆಗಳನ್ನು ಹೊಂದಿರುವಂತಹ ನಾಯಕರಾಗಿದ್ದರು. ಎಲ್ಲಾ ಕೆಲಸ -ಕಾರ್ಯಗಳಿಗೂ ಸಹಕಾರವನ್ನು ಕೊಡುತ್ತಿದ್ದರು. ಮೊನ್ನೆಯಷ್ಟೇ ಮಹಾರಾಷ್ಟ್ರದ  ಸಿಎಂ ಹೇಳಿದ್ದರು. ಅವರ ಆತ್ಮಕ್ಕೆ ಶಾಂತಿಸಿಗಲಿ. ಅವರ ಕುಟುಂಬ ವರ್ಗದವರಿಗೆ ಮತ್ತುಅವರ ಬೆಂಬಲಿಗರಿಗೆ  ಈ ದುಃಖವನ್ನು ಸಹಿಸುವ ಶಕ್ತಿಯನ್ನು ಆ ದೇವರು ಕೊಡಲಿ ಎಂದು ಸಾಂತ್ವನ ಹೇಳಿದ್ದಾರೆ.

ರಾಜಕಾರಣಿಗಳಾದ ನಾವು ಹೆಚ್ಚು ಜಾಗರೂಕತೆಯಿಂದಿರಬೇಕು. ಹೊರಗಡೆ ಪ್ರಯಾಣ ಮಾಡುವಾಗ ಎಚ್ಚರಿಕೆಯಿಂದಿರಬೇಕು.ವಿಮಾನ ಅಪಘಾತಗಳಲ್ಲಿ ಹಲವಾರು ನಾಯಕರನ್ನು ಕಳೆದುಕೊಂಡಿದ್ದೇವೆ ಎಂದು ಡಿಕೆ ಶಿವಕುಮಾರ್‌ ತಿಳಿಸಿದ್ದಾರೆ.

Leave a Reply

Your email address will not be published. Required fields are marked *