ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್ ಪ್ರಕರಣದಲ್ಲಿ ಮಹತ್ತರ ತಿರುವು ಕಂಡಿದ್ದು ಸುಪ್ರೀಂಕೋರ್ಟ್ ನಟ ದರ್ಶನ್ ಬೇಲ್ ಕ್ಯಾನ್ಸಲ್ ಮಾಡಿದ ಬೆನ್ನಲ್ಲೇ ನಟಿ ರಮ್ಯಾ ಸ್ಟೋರಿಯೊಂದನ್ನು ಹಂಚಿಕೊಂಡಿದ್ದಾರೆ.
ಕಾನೂನಿನ ಮುಂದೆ ಎಲ್ಲರೂ ಸಮಾನರುವ .ಕಾನೂನಿನ ಮೇಲೆ ನಂಬಿಕೆಯನ್ನಿಡಿ. ಕಾನೂನನ್ನು ಕೈಗೆ ತೆಗೆದುಕೊಳ್ಳಬೇಡಿ. ನ್ಯಾಯ ಸಿಕ್ಕೇ ಸಿಗುತ್ತದೆ ಎಂದು ತಮ್ಮ ಇನ್ಟಾಗ್ರಾಂ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ರೇಣುಕಾಸ್ವಾಮಿ ಕೊಲೆ ಕೇಸಿನಲ್ಲಿ ದರ್ಶನ್ ಮತ್ತು ಇತರರಿಗೆ ಒಳ್ಳೆಯ ಸಂದೇಶವನ್ನು ರವಾನಿಸಿದೆ ನಾನು ಹೇಳುವುದೆನೆಂದರೆ ಕಾನೂನಿನ ಮೇಲೆ ನಂಬಿಕೆ ಇಡಿ. ಕಾನೂನು ಎಲ್ಲರಿಗೂ ನ್ಯಾಯ ಸಿಗುತ್ತದೆ ಎಂದು ಹೇಳಿದ್ದಾರೆ.
