ಬೆಂಗಳೂರು: ವಾಲ್ಮೀಕಿ ಹಗರಣದ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿದ್ದ ಮಾಜಿ ಸಚಿವ ನಾಗೇಂದ್ರ ಇಂದು(ಬುಧವಾರ) ಬಿಡುಗಡೆಯಾಗಿದ್ದಾರೆ.

ಪರಪ್ಪನ ಅಗ್ರಹಾರದ ಜೈಲಿನಿಂದ ಹೊರಬಂದಿರುವ ನಾಗೇಂದ್ರ, ದೇಶದಲ್ಲಿ ಕಾಂಗ್ರೆಸ್‌ ಸರ್ಕಾರವನ್ನು ತೊಡೆದುಹಾಕಲು ಬಿಜೆಪಿ ತಂತ್ರಗಳನ್ನು ಮಾಡುತ್ತಿದೆ ಎಂದು  ಬಿಜೆಪಿ ಪಕ್ಷದ ವಿರುದ್ದ ವಾಗ್ದಾಳಿಯನ್ನು ನಡೆಸಿದ್ದಾರೆ.

ವಾಲ್ಮೀಕಿ ನಿಗಮದ ಹಗರಣದಲ್ಲಿ ನನ್ನ ತಪ್ಪು ಏನಿಲ್ಲದಿದ್ದರೂ ನನ್ನನ್ನು ಅರೆಸ್ಟ್‌ ಮಾಡಿಸಿ, ಲೋಕಾಯುಕ್ತ ಅಧಿಕಾರಿಗಳಿಂದ ಕಿರುಕುಳವನ್ನು ನೀಡಿ, ಸಿಎಂ ಸಿದ್ದರಾಮಯ್ಯ, ಡಿಕೆ,ಶಿವಕುಮಾರ್‌ ಹೆಸರುಗಳನ್ನು ಹೇಳುವಂತೆ ಚಿತ್ರಹಿಂಸೆ ನೀಡಿದ್ದಾರೆ. ಪ್ರಕರಣದಲ್ಲಿ ಸಿಲುಕಿಸುವ ಪ್ಲಾನ್‌ ಬಿಜೆಪಿ ಹಿರಿಯ ನಾಯಕರ ಷಡ್ಯಂತ್ರ ಎಂದು ಆರೋಪಿಸಿದ್ದಾರೆ.

ವಾಲ್ಮೀಕಿ ನಿಗಮದ ಹಗರಣದಲ್ಲಿ ನಮ್ಮ ಸರ್ಕಾರವನ್ನು ಸಿಕ್ಕಿಹಾಕಿಸಿ, ಕಾಂಗ್ರೆಸ್ಸನ್ನು ಅಸ್ಥಿರಗೊಳಿಸಲು ಎಲ್ಲಾ ಪ್ರಯತ್ನಗಳು ನಡೆಯುತ್ತೀವೆ.ಆದರೆ ಕೇಂದ್ರ ಸರ್ಕಾರದ ಬೆದರಿಕೆಗಳಿಗೆ ಹೆದರುವ ಮಾತೇ ಇಲ್ಲ ಎಂದು ಖಡಕ್‌ ಹೇಳಿಕೆ ನೀಡಿದ್ದಾರೆ.

Leave a Reply

Your email address will not be published. Required fields are marked *