ಬೆಂಗಳೂರು: ಭಾರತದ ಸಂವಿಧಾನದ ಪ್ರಕಾರ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತಮ್ಮದೇ ಆದ ಅಧಿಕಾರ ವ್ಯಾಪ್ತಿಯನ್ನು ಹೊಂದಿವೆ. ರಾಜ್ಯಪಾಲರನ್ನು ಕೇಂದ್ರ ಸರ್ಕಾರ ನೇಮಕ ಮಾಡುವುದರಿಂದ, ಅವರು ಕೇಂದ್ರದ ಏಜೆಂಟರಂತೆ ವರ್ತಿಸುತ್ತಿದ್ದಾರೆ ಎಂದು ಸಿದ್ದರಾಮಯ್ಯನವರ ಆರೋಪ ಮಾಡಿದ್ದಾರೆ. ಚುನಾಯಿತ ಸರ್ಕಾರವನ್ನು ಅಸ್ಥಿರಗೊಳಿಸಲು ರಾಜಭವನವನ್ನು ಬಳಸಿಕೊಳ್ಳಲಾಗುತ್ತಿದೆ ಎಂಬುದು ಸಿಎಂ ಸಿದ್ದರಾಮಯ್ಯನವರ ಗಂಭೀರ ಆರೋಪವಾಗಿದೆ.
ಮುಖ್ಯಮಂತ್ರಿಗಳ ವಿರುದ್ಧ ಮುಡಾ ಅಥವಾ ಇತರ ಹಗರಣಗಳ ತನಿಖೆಗೆ ರಾಜ್ಯಪಾಲರು ಅನುಮತಿ ನೀಡಿದ ಸಂದರ್ಭದಲ್ಲಿ ಈ ಕೈಗೊಂಬೆಯಾಗಿದ್ದಾರೆ ಎಂಬ ಪದವನ್ನು ಬಳಕೆಮಾಡಿದ್ದರು. ರಾಜ್ಯ ಸಚಿವ ಸಂಪುಟದ ಸಲಹೆಯನ್ನು ಧಿಕ್ಕರಿಸಿ, ವಿರೋಧ ಪಕ್ಷಗಳ ದೂರಿಗೆ ತಕ್ಷಣ ಸ್ಪಂದಿಸುವುದು ರಾಜ್ಯಪಾಲರ ‘ಪಕ್ಷಪಾತ ಧೋರಣೆ‘ ಎಂದು ಕಾಂಗ್ರೆಸ್ ಪ್ರತಿಪಾದಿಸುತ್ತಿದೆ.
ರಾಜ್ಯಪಾಲರು ಸಂವಿಧಾನದ ರಕ್ಷಕರಾಗಿ ತಟಸ್ಥವಾಗಿರಬೇಕು. ಆದರೆ, ಸಿದ್ದರಾಮಯ್ಯನವರ ಪ್ರಕಾರ ರಾಜ್ಯಪಾಲರು ಬಿಜೆಪಿಯ “ರಾಜಕೀಯ ಅಜೆಂಡಾ” ಜಾರಿಗೆ ತರುತ್ತಿದ್ದಾರೆ. ಇದು ಸಂವಿಧಾನದ 163ನೇ ವಿಧಿಯ ಆಶಯಕ್ಕೆ ವಿರುದ್ಧವಾಗಿದೆ ಎಂದು ಹೇಳಿದ್ದಾರೆ.
