ತುಮಕೂರು: ಇನ್ನೂ ಮೂರು ವರ್ಷ ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳು ಮುಂದುವರೆಯುತ್ತವೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಯಾರು ಏನೇ ಹೇಳಿದರೂ, ಪಕ್ಷದ ಬಗ್ಗೆ ಎಷ್ಟೇ ಟೀಕೆ ಮಾಡಿದರೂ ಕೂಡ ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ. ರಾಜ್ಯದಲ್ಲಿ ಇನ್ನೂ ಮೂರುವರೆ ವರ್ಷಗಳ ಕಾಲ ಗ್ಯಾರಂಟಿ ಯೋಜನೆಗಳನ್ನು ಮುಂದುವರೆಸುತ್ತೇವೆ ಎಂದಿದ್ದಾರೆ.
ಕರ್ನಾಟಕದಲ್ಲಿ ಹಲವಾರು ಅಭಿವೃದ್ದಿ ಕಾರ್ಯಗಳು ಚಾಲನೆಯಲ್ಲಿವೆ.ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಒಳ್ಳೆ ಕೆಲಸಗಳನ್ನು ಮಾಡುತ್ತೇವೆ ಎಂದು ಭರವಸೆಯನ್ನು ನೀಡಿದ್ದಾರೆ.